Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
(ರಾಜ್ಯ ) ಜಿಲ್ಲೆ

ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೂಡಲೇ ಪೂರ್ಣಗೊಳಿಸಬೇಕು ಎಂಸು ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.
ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಶನಿವಾರ ನಡೆದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನಾನಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಗ್ರಾಪಂಗಳಿಗೆ ಬಿಡುಗಡೆ ಮಾಡಿರುವ ಸಾಮಗ್ರಿ ವೆಚ್ಚದ ಅನುದಾನವನ್ನು ವಿಳಂಬ ಮಾಡದೇ ಇದೇ ಮಾ. ೧೬ನೇ ತಾರೀಖಿನೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿಸಲ್ಪಟ್ಟ ಎಲ್ಲ ಕೂಲಿಕಾರರ ಇಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಮುಖ್ಯವಾಗಿ ಸಕ್ರಿಯ ಕೂಲಿಕಾರರ ಇಕೆವೈಸಿಯನ್ನು ಕಡ್ಡಾಯವಾಗಿ ಮಾ. ೧೭ ನೇ ತಾರೀಖಿನೊಳಗೆ ಶೇ.೧೦೦ ರಷ್ಟು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು. ಪ್ರತಿ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಚಾಲ್ತಿಯಲ್ಲಿರುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಕೂಲಿಕಾರರ ಮುಖ ದೃಢೀಕರಣ ಮಾಡಿಸಬೇಕು ಎಂದು ಸೂಚಿಸಿದರು. ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಗ್ರಾಮೀಣ ಜನರಿಗೆ ಉದ್ಯೋಗದ ಅವಶ್ಯಕತೆಯಿದೆ. ಅಂತಹವರಿಗೆ ಗ್ರಾಪಂ ವತಿಯಿಂದ ಕಡ್ಡಾಯವಾಗಿ ಉದ್ಯೋಗ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಪ್ರಸ್ತುತ ಸಾಲಿನಲ್ಲಿ ವಿಜಯಪುರ ಜಿಲ್ಲೆಗೆ ೨೯.೦೦ ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ೨೩.೯೦ ಲಕ್ಷ ಮಾನವ ದಿನಗಳ ಸೃಜನೆಯಾಗಿದೆ. ಪ್ರಸ್ತುತ ವರ್ಷ ಮುಕ್ತಾಯಗೊಳ್ಳಲು ಕೆಲವು ದಿನಗಳ ಮಾತ್ರ ಬಾಕಿ ಇರುತ್ತದೆ. ಆದ್ದರಿಂದ ಬಾಕಿ ಉಳಿದ ಮಾನವ ದಿನಗಳನ್ನು ಸೃಜನೆ ಮಾಡಿ ಶೇ.೧೦೦ ರಷ್ಟು ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಪಂನ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಜಿಲ್ಲೆಯ ಎಲ್ಲ ತಾಲೂಕುಗಳ ಸಹಾಯಕ ನಿರ್ದೇಶಕರು(ಗ್ರಾ.ಉ), ಜಿ.ಪಂ. ನ ಅಭಿವೃದ್ಧಿ ಶಾಖೆಯ ಅಧೀಕ್ಷಕರು, ಎ.ಡಿ.ಪಿ.ಸಿ, ಜಿಲ್ಲಾ ಎಂ.ಐ.ಎಸ್. ಸಂಯೋಜಕರು, ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್, ಜಿಲ್ಲಾ ಐಇಸಿ ಸಂಯೋಜಕರು, ಜಿ.ಪಂ.ನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಲೂಕು ಎಮ್.ಐ.ಎಸ್ ಸಂಯೋಜಕರು, ಐಇಸಿ ಸಂಯೋಜಕರು, ಆಡಳಿತ ಸಹಾಯಕರು, ಬಿ.ಎಫ್.ಟಿ ಗ್ರಾಮ ಕಾಯಕ ಮಿತ್ರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ ಮಹಿಳೆ :ಹಟ್ಟಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮಗಾಯನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.