ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ ೯ರ ಸೋಮವಾರ ಸಂಜೆ ೪:೦೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.
ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮ ಗಾಯನವನ್ನು ಪ್ರಸ್ತುತಪಡಿಸಲಿದ್ದು, ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
