ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಪ್ರಿಲ್ ೫ರಂದು ಬಾಬು ಜಗಜೀವನ ರಾಮ ಅವರ ಜಯಂತಿ ಹಾಗೂ ಏಪ್ರಿಲ್ ೧೪ರಂದು ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿ ಪ್ರಯುಕ್ತ ೨೦೨೬-೨೭ನೇ ಸಾಲಿನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದ ಅವಧಿಯನ್ನು ಮಾ.೧೨ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನಾಂಗದವರ ಶ್ರೇಯಸ್ಸಿಗಾಗಿ, ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳು, ಪ್ರೋತ್ಸಾಹಿಸಿ, ಗುರುತಿಸಿ ಗೌರವಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ನಮೂನೆಯನ್ನು ಸಮಾಜ ಕಲ್ಯಾಣ ಇಲಾಖೆಯ ವಿಜಯಪುರ ಉಪ ನಿರ್ದೇಶಕರ ಕಚೇರಿ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್೧೨-೨೦೨೬ರೊಳಗಾಗಿ ಕಚೇರಿ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
