Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
(ರಾಜ್ಯ ) ಜಿಲ್ಲೆ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೆಚ್ ಡಿ ಕೋಟೆಯಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಡಿಪಿಒ ದೀಪಾ ಬೇಸರ

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ಅಡುಗೆ ಮನೆಯಿಂದ ಅಂತರಿಕ್ಷದವರೆಗೂ ಮಹಿಳೆಯರು ಸಾಧನೆ ಮಾಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷರಿಗೆ ಸಮಾನವಾಗಿ ಕೆಲಸಮಾಡುತ್ತಿದ್ದಾರೆ. ಆದರೂ ಮಹಿಳೆಯರ ಮೇಲೆ ಶೋಷಣೆ, ದಬ್ಬಾಳಿಕೆ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಇವರ ಸಹಯೋಗದೊಂದಿಗೆ ಮಹಿಳೆಯರಿಗೆ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಅಂತರರಾಷ್ಟ್ರಿಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಿಳೆಯರು ಶೋಷಣೆಯ ವಿರುದ್ಧ ಹೋರಾಡಲು ಎಚ್ಚರಗೊಳ್ಳುವಂತೆ ಮಾಡುವುದಕ್ಕೆ ಇಲಾಖೆಯ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಮಾಡುತ್ತೇವೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರಷ್ಟೇ ಸಮಾನವಾಗಿದ್ದರೆ. ಈ ದೇಶದ ಪ್ರಥಮ ಪ್ರಜೆ ಮಹಿಳೆ, ಭಾರತದ ಪ್ರಥಮ ಪ್ರಧಾನಿ ಮಹಿಳೆ. ಒಂದು ಕುಟುಂಬದ ಆರೋಗ್ಯ, ಶಿಕ್ಷಣ, ಮನೆಯ ಜವಾಬ್ದಾರಿ ಹಾಗೂ ಕುಟುಂಬಕ್ಕೆ ಸಹಾಯ ಮಾಡುವುದು ಒಂದು ರೀತಿಯ ಸಾಧನೆಯೇ ಸರಿ ಎಂದು ದೀಪಾ ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚಾಮರಾಜು ಮಾತನಾಡಿ, ದೇವರನ್ನು ನಾವು ನೋಡಿಲ್ಲ ಆದರೆ ಮಹಿಳೆಯರೇ ದೇವರು ಮತ್ತು ಸೃಷ್ಟಿಕರ್ತರು. ನನ್ನನ್ನು ಎತ್ತು ಸಾಕಿ ಓದಿಸಿ ವೇದಿಕೆಯಲ್ಲಿ ನಿಂತು ಮಾತನಾಡುವಂತೆ ಮಾಡಿದ್ದು ನನ್ನ ತಾಯಿ. ಇವತ್ತು ಗ್ರಾಮಪಂಚಾಯಿತಿಯಿಂದ ಹಿಡಿದು ಪಾರ್ಲಿಮೆಂಟ್ ವರೆಗೂ ಮಹಿಳೆಯರು ಇದ್ದಾರೆ. ಇದಕ್ಕೆ ಮೂಲ ಕಾರಣ ಮೀಸಲಾತಿ ಕೊಟ್ಟ ಡಾ.ಬಿ.ಆರ್. ಅಂಬೇಡ್ಕರ್ ಅವರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ನಮ್ಮ ಸರ್ಕಾರ ಇರುವರೆಗೂ ಪಂಚ ಗ್ಯಾರೆಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಹೇಳಿದರು.
ತೋಟಗಾರಿಕೆ ನಿರ್ದೇಶಕಿ ನೇತ್ರಾವತಿ, ತಾಲೂಕು ಯೋಜನಾಧಿಕಾರಿ ಜಯಂತಿ, ಕಾಂಗ್ರೆಸ್ ಮಹಿಳಾ ಘಟಕದ ಸರಗೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಲುವರಾಜು, ಮಹಿಳಾ ಆಪ್ತ ಸಮಾಲೋಚಕಿ ಜಶೀಲಾ, ಪೋಷಣ್ ಅಭಿಯಾನ ಯೋಜನೆಯ ತಾಲೂಕು ಸಂಯೋಜಕ ರಾಕೇಶ್, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ ಸಹಾಯಕ ಅವಿನಾಶ್, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶೈಲಾ ಸುಧಾಮಣಿ, ಬ್ಲಾಕ್ ಸೊಸೈಟಿ ನಿರ್ದೇಶಕಿ (ಪ್ರತಿಭೆ ಸಂಸ್ಥೆ) ಕೆ.ಎಂ.ಸುಶೀಲಾ, ಸಚಿನ್ ಬಿ.ಬಿ ಸೇರಿದಂತೆ ನೂರಾರು ಮಹಿಳೆಯರು ಇದ್ದರು.

“ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳಿಂದ ಇವತ್ತು ಮಹಿಳೆಯರು ತಮ್ಮ ಕನಸು ನನಸು ಮಾಡಿಕೊಳ್ಳುತ್ತಿದ್ದಾರೆ. ಇದರ ಸದುಪಯೋಗ ಪಡೆಯುತ್ತಿರುವ ಮಹಿಳೆಯರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಧನ್ಯವಾದ ಹೇಳುತ್ತಿದ್ದಾರೆ. ಇವತ್ತು ನಾವು ವೇದಿಕೆ ಮೇಲೆ ನಿಂತುಕೊಂಡು ಮಾತನಾಡುವುದಕ್ಕೆ ಮುಖ್ಯ ಕಾರಣ ಡಾ.ಬಿ.ಆರ್ ಅಂಬೇಡ್ಕರ್ ಅವರು. ಹೀಗಾಗಿ ಮನೆಯಲ್ಲಿ ದೇವರ ಫೋಟೋ ಜೊತೆಗೆ ಅಂಬೇಡ್ಕರ್ ಅವರ ಫೋಟೋ ಇಟ್ಟು ಪೂಜಿಸಬೇಕು.”

– ಸೌಮ್ಯ ಮಂಜುನಾಥ್
ತಾಲೂಕು ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷೆ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.