Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಲೆ ಎನ್ನುವುದು ದೊಡ್ಡ ಶಕ್ತಿ. ವಸತಿ ನಿಲಯದ ಮುದ್ದು ವಿದ್ಯಾರ್ಥಿಗಳು ಕೇವಲ ವಿದ್ಯಾಭ್ಯಾಸದಲ್ಲಿ ಮಾತ್ರವಲ್ಲ ಕಲೆ, ಸಂಸ್ಕೃತಿ, ಕ್ರೀಡೆ ಸೇರಿದಂತೆ ಸರ್ವಾಂಗೀಣವಾಗಿ ಬೆಳವಣಿಗೆಯಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಡಾ. ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಮಾ.೬ರ ಶುಕ್ರವಾರ ಸಂಜೆ ೫:೦೦ ಗಂಟೆಗೆ ಹಮ್ಮಿಕೊಂಡಿರುವ ಕಲಾ ತರಬೇತಿ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.
ವಸತಿ ನಿಲಯದ ವಿದ್ಯಾರ್ಥಿಗಳಿಗೆ ನೃತ್ಯ ಕಲೆಯನ್ನು ಕಲಿಯಲು ಅವಕಾಶ ಮಾಡಿಕೊಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರಿಗೆ ಧನ್ಯದಗಳನ್ನು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಬಿ.ಜೆ. ಇಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೬ ತಿಂಗಳವರೆಗೆ ಮಕ್ಕಳಿಗೆ ನೃತ್ಯ ತರಬೇತಿಗೆ ಅವಕಾಶ ನೀಡಿದಕ್ಕಾಗಿ ಧನ್ಯವಾದಗಳನ್ನು ತಿಳಿಸಿದರು.
ಕರ್ನಾಟಕ ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸದಸ್ಯ ಆರ್.ಬಿ.ನಾಯ್ಕ ಮಾತನಾಡಿ, ನೃತ್ಯ ಕಲೆಗೆ ಜಗತ್ತಿನ ಎಲ್ಲ ಕಡೆಗೆ ಸ್ಥಾನಮಾನವಿದೆ ಎಂದು ಹೇಳಿದರು. ತಾವು ಸಹ ಲಂಬಾಣಿ ನೃತ್ಯದ ತರಬೇತಿ ನೀಡಿ ಬೆಂಗಳೂರಿನ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಲಂಬಾಣಿ ನೃತ್ಯದ ತರಬೇತಿ ನೀಡಿದ್ದು ಆ ತಂಡವು ಅಮೇರಿಕದಲ್ಲಿ ನಡೆದ ‘ಅಕ್ಕಬಳಗ’ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಆಯ್ಕೆಯಾಗಿರುವ ವಿಷಯವನ್ನು ತಿಳಿಸಿದರು. ತಮ್ಮ ಕಲಾ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರವು ತಮಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿರುವುದನ್ನು ಸ್ಮರಿಸಿದರು.
ಕರ್ನಾಟಕ ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸದಸ್ಯ ಸುರೇಖಾ ಲಮಾಣಿ ಮಾತನಾಡಿ, ದೇವನೂರು ಮಹಾದೇವಪ್ಪ ಅವರು ಹೇಳಿದಂತೆ ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಯಾವತ್ತಿಗೂ ಫಲ ಕೊಡುತ್ತದೆ’ ಎನ್ನುವಂತೆ ಅಕ್ಷರದ ಜೊತೆ ಜೊತೆಗೆ ಮಕ್ಕಳಿಗೆ ನೃತ್ಯದ ತರಬೇತಿಯನ್ನು ನೀಡಿದ್ದು, ಈ ತರಬೇತಿಯನ್ನು ಜೀವನದಲ್ಲಿ ಮುಂದುವರೆಸಿಕೊಂಡು ಉನ್ನತ ಮಟ್ಟದಲ್ಲಿ ಬೆಳೆಯುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸ್ವಾಗತಿಸಿದರು.ಮೋಹನ ಕಟ್ಟಿಮನಿ ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಶಿರೀನ್ ಕೌಸರ, ಮೀನಾಕ್ಷಿ ಮಠಪತಿ, ವಸತಿ ನಿಲಯದ ಮೇಲ್ವಿಚಾರಕರು, ವಿಜಯಪುರ, ನೃತ್ಯ ತರಬೇತಿದಾರರಾದ ರಂಗನಾಥ ಬತ್ತಾಸಿ ಹಾಗೂ ಕು.ರೋಹಿಣಿ ತಳವಾರ, ಕು.ಪೂರ್ವಿ ತಳವಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿಗಳು ಹಾಗೂ ವಸತಿ ನಿಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.