Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ :ಡಾ.ಮೀನಾ ಚಂದಾವರಕರ

ಹೆಣ್ಣುಮಕ್ಕಳು ದೈಹಿಕವಾಗಿ ಸಬಲರಾಗಿರುವುದು ಮುಖ್ಯ :ಸೋಮನಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ :ಡಾ.ಮೀನಾ ಚಂದಾವರಕರ
(ರಾಜ್ಯ ) ಜಿಲ್ಲೆ

ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ :ಡಾ.ಮೀನಾ ಚಂದಾವರಕರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ. ಮಹಿಳೆಯರು ಇಂದು ವಿಜ್ಞಾನ ಕ್ಷೇತ್ರವೂ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಪುರುಷರಿಗೆ ಸರಿಸಮಾನಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯ (ದಕ್ಷಿಣ) ಅಧ್ಯಕ್ಷೆ ಡಾ.ಮೀನಾ ಚಂದಾವರಕರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-೨೦೨೬ ಉದ್ಘಾಟಿಸಿ ಅವರು ಮಾತನಾಡಿದರು.
‘ಕೊಟ್ಟರೆ ಪಡೆಯಬಹುದು’ ಎಂಬ ತತ್ವದೊಂದಿಗೆ, ಕುಟುಂಬ ಮತ್ತು ಸಮಾಜದಲ್ಲಿ ಪುರುಷರ ಸಹಕಾರದಿಂದ ಮಹಿಳೆಯರು ಇಂದು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಒಳ್ಳೆಯತನವೆಂಬುದು ಎಂದಿಗೂ ವಿಫಲವಾಗದ ಹೂಡಿಕೆ ಎಂದು ಹೇಳಿದ ಅವರು, ಸದಾ ದಯಾಳು ಮತ್ತು ಸಹಾಯ ಮನೋಭಾವದಿಂದ ಬದುಕಬೇಕು, ಪ್ರಾರ್ಥನೆ ಮಾಡುವ ಕೈಗಳಿಗಿಂತ ಸಹಾಯ ಮಾಡುವ ಕೈಗಳು ಮಹತ್ತರವಾದವು. ಜೀವನದಲ್ಲಿ ತೃಪ್ತಿ, ಸಂತೋಷ ಮತ್ತು ಆಧ್ಯಾತ್ಮಿಕ ಶಕ್ತಿ ಅಗತ್ಯವಾಗಿದ್ದು, ‘ಪ್ರತಿ ದಿನವೂ ಮಹಿಳಾ ದಿನವೇ’ ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ-೨೦೨೫ ಪುರಷ್ಕೃತ ಪ್ರಕಾಶ ಗೌಡರ ಮಾತನಾಡಿ, ವಿಜ್ಞಾನದ ಅಭಿವೃದ್ಧಿಯೊಂದಿಗೆ ಸಮಾಜದಲ್ಲಿಯೂ ಹಲವು ಬದಲಾವಣೆಗಳು ಸಂಭವಿಸುತ್ತಿದ್ದು, ಇಂದು ಕೃತಕ ಬುದ್ಧಿಮತ್ತೆ ಯುಗಕ್ಕೆ ನಾವು ಕಾಲಿಟ್ಟಿದ್ದೇವೆ. ಇದರಿಂದ ಮಾನವರು ತಮ್ಮ ಕೆಲಸವನ್ನು ಕಳೆದುಕೊಳ್ಳುವುದಿಲ್ಲ; ಪ್ರಕೃತಿ ಇರುವವರೆಗೆ ಮಾನವ ಅಭಿವೃದ್ಧಿ ಮುಂದುವರಿಯುತ್ತದೆ ಎಂದು ಅಭಿಪ್ರಾಯಪಟ್ಟರು
ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯೆ ಡಾ.ಮಾಧುರಿ ಡಿ ಬಿರಾದಾರ್ ಮಾತನಾಡಿ, ಮಹಿಳೆಯರು ವಿಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಮತ್ತು ಸಂಶೋಧನೆ ಮಾಡುವ ಅವಕಾಶಗಳು ಕಡಿಮೆ ಇದ್ದರೂ, ಇಂದಿನ ಕಾಲದಲ್ಲಿ ಮಹಿಳೆಯರು ವಿಜ್ಞಾನದಲ್ಲಿ ದೊಡ್ಡ ಸಾಧನೆಗಳನ್ನು ಮಾಡುತ್ತಿದ್ದಾರೆ. ತಂತ್ರಜ್ಞಾನ, ಅಂತರಿಕ್ಷ ವಿಜ್ಞಾನ, ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ವಿಜಯಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಎಸ್ ಸಂಬಣ್ಣಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿಜ್ಞಾನ ದಿನಾಚರಣೆ ಕೇವಲ ಒಂದು ದಿನದ ಸಂಭ್ರಮವಾಗದೇ ನಮ್ಮ ದಿನನಿತ್ಯದ ಬದುಕಿನ ಪ್ರತಿಯೊಂದು ಹೆಜ್ಜೆಯಲ್ಲೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಪ್ರಶ್ನಿಸುವ ಮತ್ತು ಅನ್ವೇಷಿಸುವ ಹಂಬಲವು ವಿದ್ಯಾರ್ಥಿಗಳಲ್ಲಿ ಸದಾ ಜೀವಂತವಾಗಿರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಮಹಿಳೆಯರನ್ನು ಹುರಿದುಂಬಿಸುವುದು ಅತ್ಯಂತ ಅಗತ್ಯವಾಗಿದ್ದು ಇದರಿಂದ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ಈ ಅವಕಾಶಗಳ ಮೂಲಕ ಅವರು ವಿವಿಧ ಹುದ್ದೆಗಳಲ್ಲಿ ಸಾಧನೆ ಮಾಡಬಹುದು ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಅಪಾರವಾಗಿದೆ. ಸುಧಾ ಮೂರ್ತಿ ಅವರಂತಹ ಮಹಿಳೆಯರು ಇಂದು ಸಮಾಜಕ್ಕೆ ಸ್ಪೂರ್ತಿದಾಯಕ ವ್ಯಕ್ತಿಗಳಾಗಿದ್ದಾರೆ ಎಂದು ಉಲ್ಲೇಖಿಸಿದರು. ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಮಹಿಳೆಯರು ಹೆಮ್ಮೆಯ ವಿಜ್ಞಾನಿಗಳಾಗಿ ಹೊರಹೊಮ್ಮಬೇಕು ಎಂದು ಆಶಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿನಿಯರಿಗೆ ಅತಿಥಿಗಳಿಂದ ಪ್ರಶಸ್ತಿ ಪತ್ರ ವಿತರಿಸಲಾಯಿತು. ಡಾ.ನಟರಾಜ ದುರ್ಗಣ್ಣವರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಕಾರ್ಯದರ್ಶಿ ಪ್ರೊ.ಲಕ್ಷಿö್ನದೇವಿ ವೈ., ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಅಜೀಜ ಮಕಾಂದಾರ, ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ವಿವಿಯ ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಗೂ ಪ್ರಾರ್ಥನಾ ಗೀತೆ ಹಾಡಿದರು. ಡಾ.ಬಾಬು ಲಮಾಣಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಸವಿತಾ ಹುಲಮನಿ ಅತಿಥಿಯರನ್ನು ಪರಿಚಯಿಸಿದರು. ಡಾ.ಸಂಜೀವಕುಮಾರ ಗಿರಿ ರಾಷ್ಟೀಯ ವಿಜ್ಞಾನ ದಿನದ ಚಟುವಟಿಕೆಗಳ ವರದಿ ವಾಚಿಸಿದರು. ಡಾ.ಜಾಯ್ ಹೊಸಕೇರಿ ವಂದಿಸಿದರು. ಡಾ.ರೋಹಿಣಿ ಭುಸನೂರಮಠ ಸಂವಿಧಾನ ಪ್ರಸ್ತಾವನೆ ಓದಿಸಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಹೆಣ್ಣುಮಕ್ಕಳು ದೈಹಿಕವಾಗಿ ಸಬಲರಾಗಿರುವುದು ಮುಖ್ಯ :ಸೋಮನಾಳ

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ :ಡಾ.ಮೀನಾ ಚಂದಾವರಕರ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳು ದೈಹಿಕವಾಗಿ ಸಬಲರಾಗಿರುವುದು ಮುಖ್ಯ :ಸೋಮನಾಳ
    In (ರಾಜ್ಯ ) ಜಿಲ್ಲೆ
  • ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ
    In (ರಾಜ್ಯ ) ಜಿಲ್ಲೆ
  • ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ
    In (ರಾಜ್ಯ ) ಜಿಲ್ಲೆ
  • ನೂತನ ಎಸ್.ಡಿ.ಎಂ.ಸಿ ರಚನೆ
    In (ರಾಜ್ಯ ) ಜಿಲ್ಲೆ
  • ಎಲ್ಲ ರಂಗದಲ್ಲೂ ಉನ್ನತ ಸಾಧನೆಯ ನಗೆ ಬೀರಿದ ಮಹಿಳೆ
    In (ರಾಜ್ಯ ) ಜಿಲ್ಲೆ
  • ಆಕ್ಷಪರ್ಡ ಚೌಧರಿ ಕೋಚಿಂಗ್ ಕ್ಲಾಸಿಸ್ ಗಮನಾರ್ಹ ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜಕೀಯ-ಆರ್ಥಿಕ ಕ್ಷೇತ್ರದಲ್ಲಿ ಮಹಿಳೆಯರು ಮುನ್ನಡೆಯಬೇಕು :ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.