Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ
(ರಾಜ್ಯ ) ಜಿಲ್ಲೆ

ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವ್ಯವಸ್ಥಿತ, ಸುಸೂತ್ರ ಹಾಗೂ ಪಾರದರ್ಶಕ ಪರೀಕ್ಷೆಗೆ ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇದೇ ಮಾರ್ಚ್ ೧೮ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ನೀಡಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಹಾಗೂ ನಿರ್ವಹಣೆ ಕುರಿತ ಸಲಹೆ ನೀಡಿದರು.
ಸಿಸಿಟಿವಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ತನ್ಮೂಲಕ ಪರೀಕ್ಷೆಯ ಪಾವಿತ್ರ‍್ಯತೆ ಕಾಯ್ದುಕೊಳ್ಳಬೇಕು ಎಂದರು.
ಬಿಇಒ, ತಹಶೀಲ್ದಾರ್ ಅವರು ತಾಲೂಕಿನಲ್ಲಿ ಸಭೆ ನಡೆಸಿ ಅಗತ್ಯ ಸೂಚನೆ ನೀಡಬೇಕು. ಮೈಕ್ರೊ ಪ್ಲ್ಯಾನಿಂಗ್ ಮಾಡಿಕೊಳ್ಳಬೇಕು ಪರೀಕ್ಷಾ ಪ್ರಕ್ರಿಯೆಯಲ್ಲಿ ಲೋಪ-ದೋಷಗಳಾಗಬಾರದು. ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದೂ ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಪಾರದರ್ಶಕವಾಗಿ ಪರೀಕ್ಷೆ ನಡೆಸುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮಿ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗುವುದು. ತುರ್ತು ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಮಖಂಡಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಆದ ಜಿಲ್ಲಾ ನೋಡಲ್ ಅಧಿಕಾರಿಗಳಾದ ಮಂಗಳಾ ನಾಯಕ ಮಾತನಾಡಿ, ಜೂನ್ ತಿಂಗಳಿಂದಲೇ ಪರೀಕ್ಷಾ ಸಿದ್ದತೆ ನಡೆದಿದೆ. ಹಾಗಾಗಿ ಎಲ್ಲರೂ ಪಾರದರ್ಶಕ ಪರೀಕ್ಷೆಗೆ ಸಹಕರಿಸಬೇಕು ಎಂದರು. ಈ ಸಂದರ್ಭದಲ್ಲಿ ಡೈಟ್ ಪ್ರಾಚಾರ್ಯರಾದ ಉಮಾದೇವಿ ಸೊನ್ನದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಅಧಿಕಾರಿ ರಾಹುಲ್ ಭಾವಿದೊಡ್ಡಿ, ವಿಷಯ ಪರಿವೀಕ್ಷಕ ಶಿವಾನಂದ ಬ್ಯಾಹಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪರೀಕ್ಷೆಗೆ ನಿಯೋಜಿತ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು

ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರ ಕಾರ್ಯ ಗುರುತರವಾಗಿದೆ. ನಮ್ಮ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಹೇಳಿದರು.
ಪರೀಕ್ಷೆ ನಿಯಮಗಳನ್ವಯ ಕಾರ್ಯ ನಿರ್ವಹಿಸಿ, ತಮ್ಮ ನಿಯೋಜಿತ ಪರೀಕ್ಷಾ ಕೇಂದ್ರಗಳಲ್ಲಿ ಮಾಡಿಕೊಂಡಿರುವ ಪೂರ್ವ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಬೇಕು. ಮುಂಚೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಯಾವುದೇ ಸೌಲಭ್ಯಗಳಿಲ್ಲ ಎಂಬ ದೂರುಗಳು ಬಾರದಂತೆ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಪರೀಕ್ಷಾ ಮಾರ್ಗ ಸೂಚಿಗಳಂತೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಈ ವಿಷಯದಲ್ಲಿ ಆಯಾ ಬಿಇಒಗಳು ಜವಾಬ್ದಾರಿ ಮಹತ್ತರವಾಗಿದ್ದು, ಕುಂಟು ನೆಪ ಹೇಳದೇ ಪಾರದರ್ಶಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು ೪೨,೪೫೦ ವಿದ್ಯಾರ್ಥಿಗಳ ನೋಂದಣಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ ಮಾತನಾಡಿ, ಮಾರ್ಚ್ ೧೮ ರಿಂದ ಏಪ್ರಿಲ್ ೦೨ ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು ೪೨,೪೫೦ ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. ೧೩೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಭೆಗೆ ವಿವರಿಸಿದರು.

“ಎಸ್‌ಎಸ್ ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ ೧೩೭ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು.”

– ರಾಮನಗೌಡ ಹಟ್ಟಿ
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.