Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಯುವಕರ ಆಗ್ರಹ
(ರಾಜ್ಯ ) ಜಿಲ್ಲೆ

ಸರಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಯುವಕರ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳಲ್ಲಿ ದೀರ್ಘಕಾಲದಿಂದ ಖಾಲಿ ಉಳಿದಿರುವ ಸರಕಾರಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಜಮಖಂಡಿಯ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಎದುರುಗಡೆ ಯುವ ಅಧಿವೇಶನ ಆಯೋಜಿಸಲಾಯಿತು.
ಈ ಅಧಿವೇಶನದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ ಉದ್ಯೋಗಾ ಕಾಂಕ್ಷಿ ಯುವಕರು ಹಾಗೂ ಚಿಂತಕರು ಭಾಗವಹಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ, ಖಾಲಿ ಹುದ್ದೆಗಳ ಹೆಚ್ಚಳ, ಪರೀಕ್ಷಾ ವ್ಯವಸ್ಥೆಯ ಅಸಮರ್ಪಕತೆ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದರು.
ರಾಜ್ಯದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.84 ಲಕ್ಷ ಸರಕಾರಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಕೇಂದ್ರ ಸರಕಾರದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 9.64 ಲಕ್ಷ ಹುದ್ದೆಗಳನ್ನು ಕೂಡ ಶೀಘ್ರದಲ್ಲಿ ಭರ್ತಿ ಮಾಡಬೇಕು. ಕೆಪಿಎಸ್‌ಸಿ, ಕೆಇಎ, ಕೆಎಸ್‌ಪಿ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ಖಾಲಿ ಹುದ್ದೆಗಳ ವಿವರ ಮತ್ತು ವಾರ್ಷಿಕ ನೇಮಕಾತಿ ಕ್ಯಾಲೆಂಡರ್‌ ಪ್ರಕಟಿಸಿ ನಿಗದಿತ ವೇಳಾಪಟ್ಟಿಯಂತೆ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಯಪಿಎಸ್‌ಪಿ ಸೇರಿದಂತೆ ಎಲ್ಲ ಕೇಂದ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸಬೇಕು. ನೇಮಕಾತಿ ಪ್ರಕ್ರಿಯೆಗಳಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಂಡು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು ಹಾಗೂ ದುಬಾರಿ ಅರ್ಜಿ ಶುಲ್ಕವನ್ನು ರದ್ದುಪಡಿಸಬೇಕು. ರಾಜ್ಯದ ನೇಮಕಾತಿ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಯಪಿಎಸ್‌ಪಿ ಮಾದರಿಯಲ್ಲಿ ಕೆಪಿಎಸ್‌ಸಿ ಯನ್ನು ಪುನರ್‌ರಚನೆ ಮಾಡಬೇಕು. ಸಭೆಯಲ್ಲಿ
ಅಂಗೀಕರಿಸಿದ ಈ ನಿರ್ಣಯಗಳ ಕುರಿತು ರಾಜ್ಯ ಸರಕಾರವು ತುರ್ತು ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಯುವಕರು ಆಗ್ರಹಿಸಿದರು.
ಅಧಿವೇಶನದ ಸಭಾಧ್ಯಕ್ಷ ಪ್ರದೀಪ ಮೆಟಗುಡ್ಡ ಮಹಾರಾಜ ಅವರ ಮಾರ್ಗದರ್ಶನದಲ್ಲಿ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಏಕಮತದಿಂದ ಅಂಗೀಕರಿಸಿ ಕೇಂದ್ರ ಸರಕಾರದ ವ್ಯಾಪ್ತಿಯ ವಿಷಯಗಳ ಬಗ್ಗೆ ರಾಜ್ಯ ಸರ್ಕಾರವು ಸೂಕ್ತ ಮಟ್ಟದಲ್ಲಿ ಒತ್ತಡ ತಂದು ಯುವಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಕ್ರಮ ವಹಿಸಬೇಕು ಎಂದು ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ ಹಣಮಂತ ಯಮಗಾರ, ಕಲ್ಲಪ್ಪ ಬಿರಾದಾರ, ಶೇಖರ್‌ಕಾಂಬಳೆ, ಶ್ರೀಶೈಲ ಭೂಮಾರ, ಸುಭಾಸ ಶಿರಬೂರ, ದುಂಡಪ್ಪ ಯರಗಟ್ಟಿ ಕರೆಪ್ಪ ಪೂಜಾರ, ಆಕಾಶ ಬೀಳಗಿ ಸೇರಿದಂತೆ ಹಲವು ಯುವಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.