ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಚನ ಕಲ್ಯಾಣ ಎಂಬ ಅಹೋರಾತ್ರಿ ಒಂಬತ್ತು ಗಂಟೆ ಅವಧಿಯ ನಾಟಕ ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಏರ್ಪಡಿಸಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ-ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು, ಗಾಯಕರಿಂದ ಅರ್ಜಿ ಅಹ್ವಾನಿಸಲಾಗಿದೆ.
೧೮ ರಿಂದ ೪೦ ವರ್ಷ ವಯೋಮಿತಿಯಲ್ಲರುವ, ರಂಗ ಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಅದ್ಯತೆ ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ ೨೦ ರೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ,ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-೫೬೦೦೫೬ ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ತಲುಪುವಂತೆ ಅಥವಾ ಇಮೇಲ್ ವಿಳಾಸ: kanakaresearchcentre@gmail.com ದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳವರೆಗೆ ಪೂರ್ಣಕಾಲಿಕವಾಗಿ ತರಬೇತಿ-ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದೆ. ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ kannadasiri.karnataka.gov.in ನಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:೯೪೪೮೫೩೮೬೨೦ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
