Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ
(ರಾಜ್ಯ ) ಜಿಲ್ಲೆ

ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿ | ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಬುಧವಾರ ಸ್ಪಷ್ಪಪಡಿಸಿದ್ದಾರೆ.
ನಗರದ ಆಹಾರ ಭವನದಲ್ಲಿ IOC ,BPC,HPC,GAIL ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಚಿವರು, ಅರಬ್ ರಾಷ್ಟ್ರಗಳಾದ ಯುಎಸ್ಎ , ಗಲ್ಪ್ ರಷ್ಯಾದ ದೇಶಗಳಿಂದ ನಮ್ಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ದದ ಕಾರಣದಿಂದ ಅನಿಲದ ವೆಸೆಲ್ (ಶಿಪ್ ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೆ ಆತಂಕಕ್ಕೆ ಒಳಗಾಗಬಾರದು ಎಂದರು.
ಜನರು ಆತಂಕ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ ಒಂದು ಸಿಲಿಂಡರ್ ನೀಡಲಾಗುತ್ತದೆ. ಹಳ್ಳಿಗಳಾಗಲಿ, ನಗರದಲ್ಲಿರಲಿ ಜನರು ಮಿತವಾಗಿ ಗ್ಯಾಸ್ ನ್ನು ಉಪಯೋಗಿಸಬೇಕು. ತೀರಾ ಅವಶ್ಯಕತೆ ಇದ್ದದ್ದನ್ನು ಮಾತ್ರ ಬಳಸಬೇಕು. ಆತಂಕಪಟ್ಟು ಗ್ರಾಹಕರು ಹೆಚ್ಚು ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತು ಆಯಿಲ್ ಕಂಪನಿಗಳ ಜೊತೆ ಸಹಕರಿಸಬೇಕೆಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಸಂಕಷ್ಟದ ಸಮಯದಲ್ಲಿ ಅಡಿಗೆ ಅನಿಲವನ್ನು ಮಿತವಾಗಿ ಅವಶ್ಯಕತೆ ಇದ್ದರೆ ಮಾತ್ರ ಬಳಸಬೇಕು ಎಂದು ಗ್ರಾಹಕರಲ್ಲಿ ಮನವಿ ಮಾಡಿದರು.

“ಭಾರತದಲ್ಲಿ ಸುಮಾರು ಶೇ.30 ರಷ್ಟು ಮಾತ್ರ ಉತ್ಪಾದನೆ ಇದೆ. ಉಳಿದ ಶೇ. 60 ರಿಂದ 70 ರಷ್ಟನ್ನು ಆಮದು ಮಾಡಿಕೊಳ್ತಾ ಇದ್ದೀವಿ. ಅಮೇರಿಕಾ, ಗಲ್ಬ್ ಅರೇಬಿಯನ್ ಮತ್ತು ರಷ್ಯಾ ದೇಶಗಳಿಂದ ಆಮದು ಬರುತ್ತದೆ. ಈಗ ಯುದ್ಧದ ಪರಿಸ್ಥಿತಿಯಿಂದ ವೆಸಲ್ಸ್ ಬರೋದು ಸ್ವಲ್ಪ ತಡವಾಗುತ್ತಿದೆ”

– ಕೆ.ಎಚ್.ಮುನಿಯಪ್ಪ
ಆಹಾರ ಸಚಿವರು

ಕಮರ್ಷಿಯಲ್ ಸಿಲಿಂಡರ್ ಬಳಕೆಗೆ ಕಷ್ಟ

ಕಮರ್ಷಿಯಲ್ ಸಿಲಿಂಡರ್ ಬಳಕೆಯಲ್ಲಿ ಸ್ವಲ್ಪ ಕಷ್ಟವಾಗಬಹುದು. ಯಾಕಂದ್ರೆ ಮೊದಲು ಮನೆ ಬಳಕೆಗೆ ಆದ್ಯತೆ ನೀಡಲಾಗುತ್ತದೆ. ತದನಂತರ ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಸರಬರಾಜುನಲ್ಲಿ ವ್ಯತೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಹೋಟೆಲ್ ಕಲ್ಯಾಣ ಮಂಟಪಗಳಿಗೆ ಕಷ್ಟವಿದ್ದು ಆದ್ಯತೆಯ ಮೇರೆಗೆ ಸಿಲಿಂಡರ್ ಗಳನ್ನು ವಿತರಿಸಲಾಗುವುದು. ಈ ಕಠಿಣ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲು ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಪ್ರತಿವಾರ ಆಯಿಲ್ ಕಂಪನಿಗಳ ಜೊತೆ ಸಭೆ ನಡೆಯಲು ಸೂಚಿಸಿದ್ದು ಜನರು ಆತಂಕಪಡದೆ ಮಿತವಾಗಿ ಉಪಯೋಗಿಸಿದರೆ ಯಾವುದೇ ದೊಡ್ಡ ಸಮಸ್ಯೆ ಎದುರಾಗುವುದಿಲ್ಲ ಎಂದು ಸಚಿವ ಮುನಿಯಪ್ಪ ಅಭಯ ನೀಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.