ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಇದೇ ೧೩ ಶುಕ್ರವಾರದಂದು ತಾಲ್ಲೂಕಿನ ಯಾಳವಾರ ಗ್ರಾಮದ ವಿಶ್ವಭಾರತಿ ವಿದ್ಯಾವರ್ಧಕ ಸಂಸ್ಥೆಯ ಅಡಿಯಲ್ಲಿ ಸಂಸ್ಕಾರ ಉತ್ಸವ ಹಾಗೂ ೧೪ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಲಿದೆ.
ಸಂಸ್ಕಾರಧಾಮ ಶಾಲಾ ಆವರಣದಲ್ಲಿ ಸಾಯಂಕಾಲ ೫ ಗಂಟೆಗೆ ಜರುಗುವ ಕಾರ್ಯಕ್ರಮದಲ್ಲಿ ಸ್ಥಳೀಯ ಕೇದಾರಲಿಂಗಶ್ರೀ, ಕಡಕೋಳದ ರಾಜಗುರು ಮಹಾಲಿಂಗ ಸ್ವಾಮಿಜಿ ಹಾಗೂ ಹಿರೇಮಠದ ಬಸಯ್ಯಸ್ವಾಮಿಜಿ ಸಾನಿಧ್ಯ ವಹಿಸಲಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿಅಧ್ಯಕ್ಷ ದೇವೇಂದ್ರ ಬಡಿಗೇರ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಖ್ಯಾತ ನೇತ್ರತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ), ಯಾದಗಿರಿ ಜಿಲ್ಲಾ ಪಂಚಾಯಿತಿ ಮಾಜಿಅಧ್ಯಕ್ಷ ಬಸನಗೌಡ ಪಾಟೀಲ(ಯಡಿಯಾಪೂರ), ಪಿಕೆಪಿಎಸ್ ಅಧ್ಯಕ್ಷ ರಾಜುಗೌಡ ನಾಡಗೌಡ, ಸೇರಿದಂತೆ ಇತರರು ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ೧೦ ಜನ ಸಾಧಕರಿಗೆ ಸಂಸ್ಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಯಶಸ್ವಿಗೊಳಿಸಲು ಸಂಸ್ಕಾರಧಾಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಕೆ.ಪಟೇದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
