ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಕೊಡುವುದು ಬಹಳ ಅವಶ್ಯಕವಿದೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಮಂಗಳವಾರ ಮಾನಸ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ಪ್ರಥಮ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಾನಸ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕೊಡುತ್ತಿದೆ. ಈ ಕಾರ್ಯ ಇದೇ ರೀತಿ ಮುಂದುವರೆಯಲಿ, ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ನೂರಕ್ಕೆ ನೂರು ಪಲಿತಾಂಶ ಕೊಟ್ಟ ಈ ಶಾಲೆ ಇನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಯಲಿ ಎಂದರು.
ಸಿಂದಗಿ ಟಿಎಪಿಸಿಎಂಎಸ್ ಅಧ್ಯಕ್ಷ ಸಂಗಮೇಶ ಛಾಯಾಗೋಳ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖರಗೌಡ ಪೊಲೀಸ್‌ಪಾಟೀಲ ಮಾತನಾಡಿದರು.
ಸ್ಥಳೀಯ ಹಿರಿಯ ವೈದ್ಯ ಸೋಮಶೇಖರ ಹಿರೇಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಥಳೀಯ ಚೌಕಿಮಠದ ಅಭಿನವ ಮುರುಗೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ತಾಲ್ಲೂಕು ಪಂಚಾಯಿತಿ ಮಾಜಿಸದಸ್ಯ ಮಲ್ಲನಗೌಡ ಬಿರಾದಾರ, ಕೋರವಾರೇಶ್ವರ ವಿ.ವಿ ಸಂಘದ ಅಧ್ಯಕ್ಷೆ ಪ್ರಭಾವತಿ ಬಿರಾದಾರ, ಶ್ರೀನಾಥಗೌಡ ಪಾಟೀಲ, ಬಾಬು ನಡುವಿನಕೇರಿ, ಬಸವರಾಜ ಬಿರಾದಾರ ಭೀಮನಗೌಡ ಕುಳೆಕುಮಟಗಿ, ಶರಣಗೌಡ ನಾಯ್ಕಲ್, ಭೋಜನಗೌಡ ಬಿರಾದಾರ, ಅಶೋಕ ಕುಳೆಕುಮಟಗಿ, ಮಾಂತಗೌಡ ಪಾಟೀಲ, ಅಶೋಕ್ ಅಂಚೆಗಾವಿ, ಶಾಂತಿಲಾಲ್ ಚವ್ಹಾಣ, ಬಿಳಿಯಾನಪ್ಪ ಪೂಜಾರಿ, ಲಕ್ಕಪ್ಪ ಹೂಗಾರ, ಅನೀಲ ಸೋಲಂಕಾರ, ಶ್ರೀನಿವಾಸ ಕುಲಕರ್ಣಿ ಇದ್ದರು.

