Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
(ರಾಜ್ಯ ) ಜಿಲ್ಲೆ

ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಹಸೀಲ್ದಾರರಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಅಖಂಡ ರೈತ ಸಂಘ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ತಹಸೀಲ್ದಾರರಿಗೆ ಸಂಪೂರ್ಣ ಅಧಿಕಾರವನ್ನು ಸರ್ಕಾರ ನೀಡುವ ಮೂಲಕ ಜಮೀನು ದಾರಿ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಬಸವನಬಾಗೇವಾಡಿ ತಾಲೂಕಾ ಅಧ್ಯಕ್ಷ ಉಮೇಶ ವಾಲೀಕಾರ ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀನು ದಾರಿ ಸಮಸ್ಯೆ ರಾಜ್ಯಾದಂತ ರೈತರಿಗೆ ದೊಡ್ಡ ತಲೆನೋವಾಗಿದೆ. ದಿನನಿತ್ಯ ಹಳ್ಳಿಗಳಲ್ಲಿ ಹೊಲಗಳ ದಾರಿಗಾಗಿ ಕಲಹಗಳು ನಡೆಯುತ್ತಲೆ ಇವೆ. ಆದರೆ ಸರ್ಕಾರಿ ಮಾತ್ರ ಅದಕ್ಕೂ ನಮಗೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ಮೌನ ವಹಿಸಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ರೈತರು ದಾರಿಗಾಗಿ ಹೊಡದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲು ಹತ್ತುವುದು ಮಾಮುಲಾಗಿಬಿಟ್ಟಿದೆ. ಪೊಲೀಸ್ ಇಲಾಖೆ ಅಧಿಕಾರಿಗಳು ಇದು ಸಿವ್ಹಿಲ್ ಸ್ವರೂಪದ ಪ್ರಕರಣ ಇರುವುದರಿಂದ ರೈತರು ನ್ಯಾಯಾಲಯಕ್ಕೆ ಹೋಗಿ ಎಂದು ಹೇಳುವುದು ಸಾಮಾನ್ಯವಾಗಿದೆ. ನ್ಯಾಯಾಲಯದ ಮೆಟ್ಟಿಲು ಏರಿದರೆ ಪ್ರಕರಣ ಇತ್ಯರ್ಥವಾಗಲು ಕನಿಷ್ಠ 10 ರಿಂದ 12 ವರ್ಷಗಳ ಕಾಲ ಬೇಕು. ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಬೇಕಾಗುತ್ತದೆ. ಸಮಸ್ಯೆ ಇತ್ಯರ್ಥವಾಗುವರೆಗೂ ಜಮೀನು ಪಾಳು ಬೀಳುತ್ತವೆ. ಅಲ್ಲಿಯವರೆಗೆ ರೈತ ಕುಟುಂಬಗಳ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಎಂದರು.
ಅನುಭೋಗದ ಹಕ್ಕು ಅಧಿನಿಯಮ 1882ರ ಪ್ರಕಾರ ಯಾವ ರೈತ ನಿರಂತರವಾಗಿ ಅದೇ ದಾರಿಯನ್ನು ಬಳಸಿ ತಮ್ಮ ಜಮೀನುಗಳಿಗೆ ತೆರಳುತ್ತಿದ್ದರೆ ಅದನ್ನು ವಹಿವಾಟು ದಾರಿ ಎಂದು ಪರಿಗಣಿಸಬೇಕೆಂದು ಸುತ್ತೋಲೆಯಲ್ಲಿ ತಿಳಿಸಿದ್ದರೂ ಸಹ ತಹಸೀಲ್ದಾರರು ದಾರಿ ಸಮಸ್ಯೆ ಬಗೆಹರಿಸುತ್ತಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಕಾನೂನು ತಿದ್ದುಪಡಿ ಮಾಡಿ ಸುಗ್ರಿವಾಜ್ಞೆ ಹೊರಡಿಸುವ ಮೂಲಕ ದಾರಿ ಸಮಸ್ಯೆಗೆ ಅಂತ್ಯ ಹಾಡಬೇಕು. ಸರ್ಕಾರವು ದಾರಿ ಇಲ್ಲದ ರೈತರಿಗೆ ಪ್ರತಿ ವರ್ಷ ಪರಿಹಾರ ಕೊಡಬೇಕು. ಸರ್ಕಾರ ಈ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ರೈತ ಸಂಘವು ರಾಜ್ಯಾದ್ಯಂತ ಗಂಭೀರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಲಂಕೇಶ ತಳವಾರ, ವಿಠ್ಠಲ ಬಿರಾದಾರ, ಹಣಮಂತ್ರಾಯ ಹಂದ್ರಾಳ, ಕಲ್ಲಪ್ಪ ಕಾಳಗಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.