ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶಿಶು ಅಭಿವೃದ್ಧಿ ಯೋಜನೆ ಮುದ್ದೇಬಿಹಾಳ ವ್ಯಾಪ್ತಿಯಲ್ಲಿನ ಹಂದ್ರಾಳ ಗ್ರಾಮದ ೦೧ನೇ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಅಂಗನವಾಡಿ ಸಹಾಯಕಿಯರ ೦೧ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮುದ್ದೇಬಿಹಾಳದ ಶಿಶು ಅಭಿವೃದ್ಧಿ ಯೋಜನೆಯ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಮಾರ್ಚ್ ೨೪ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
