Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಸಭೆಯಲ್ಲಿ ಡಿಸಿ ಡಾ.ಆನಂದ ಕೆ.

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ತೊಂದರೆಯಾಗಂತೆ ಈಗಿನಿಂದಲೇ ಮುಂಜಾಗೃತ ಕ್ರಮಕ್ಕಾಗಿ ಯೋಜನೆ ರೂಪಿಸಿ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ದುರಸ್ತಿ ಇರುವ ಬೋರವೆಲ್‌ಗಳನ್ನು ಪುನಶ್ಚೇತನಗೊಳಿಸಿ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿರುವ ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಕುಡಿಯುವ ನೀರು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಶುದ್ಧತೆ ಕುರಿತು ಮೇಲಿಂದ ಮೇಲೆ ಪರೀಕ್ಷಿಸಿ ಶುದ್ಧ ನೀರು ದೊರಕುವಂತ ಕ್ರಮ ವಹಿಸಬೇಕು. ಪ್ರಸಕ್ತ ವರ್ಷ ಏಪ್ರೀಲ್ ೩ರ ನಂತರ ಜಿಲ್ಲೆಯಲ್ಲಿರುವ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆಗಳಿಗೆ ನೀರನ್ನು ಹರಿ ಬಿಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಬಳಸಲು ಮಾತ್ರ ಉಪಯೊಗಿಸುವಂತೆಯೂ ಹಾಗೂ ಯಾವುದೇ ಕಾರಣಕ್ಕೂ ಇತರ ಕಾರಣಕ್ಕೆ ಬಳಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆಯಾಗದಂತೆ ಕಾಲುವೆಗಳ ಮೇಲೆ ಪಂಪ್ ಸೆಟ್ ಇರದಂತೆ ನೋಡಿಕೊಳ್ಳಬೇಕು. ಹಗಲು ಮತ್ತು ರಾತ್ರಿ ವೇಳೆಯಲ್ಲಿ ನಿಗಾ ವಹಿಸುವಂತೆ ಅಗತ್ಯ ಸಿಬ್ಬಂದಿ ನೇಮಿಸಬೇಕು.ಅದರೊಂದಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಸಹಕರಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ವಸತಿ ನಿಲಯ, ಅಂಗನವಾಡಿ, ಶಾಲಾ ಕಾಲೇಜುಗಳಲ್ಲಿ ನೀರಿನ ಅಭಾವವಾಗದಂತೆ ಈಗಿಂದಲೇ ಯೋಜನೆ ರೂಪಿಸಿ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಸರಬರಾಜುವಿಗೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ತೊಂದರೆಯಾಗದಂತೆ ಜಿಲ್ಲೆಯ ಎಲ್ಲ ತಾಲೂಕು ತಹಶೀಲ್ಧಾರರು ಸಭೆ ಕರೆದು ಕ್ರಮ ವಹಿಸಬೇಕು. ಕುಡಿಯುವ ನೀರು ಸಂಗ್ರಹ ಘಟಕಗಳನ್ನು ಪ್ರತಿ ೧೫ ದಿನಗಳಿಗೊಮ್ಮೆ ಸ್ವಚ್ಚಗೊಳಿಸಿ, ಶುದ್ಧ ಕುಡಿಯುವ ನೀರು ಸರಬರಾಜಾಗುವಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಏಪ್ರೀಲ್‌ನಿಂದ ಬಿಸಿಲಿನ ಪ್ರಖರತೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಬೆಳಿಗ್ಗೆ ೧೧ ರಿಂದ ಮದ್ಯಾಹ್ನ ೪ ಗಂಟೆಯವರೆಗೆ ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕರಿಗೆ ಅಗತ್ಯ ತಿಳಿವಳಿಕೆ ಮೂಡಿಸಬೇಕು. ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಕರ ಪತ್ರ ವಿತರಣೆ, ಪ್ರಚಾರ ಫಲಕ, ಧ್ವನಿವರ್ಧಕಗಳನ್ನು ಬಳಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಈಗಾಗಲೇ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತರಬೇಕು. ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಗುಡುಗು ಮತ್ತು ಸಿಡಿಲುಗಳಿಂದ ಸುರಕ್ಷಿತವಾಗಿ ರಕ್ಷಿಸಿಕೊಳ್ಳಲು ಹಾಗೂ ಪ್ರಾಣಾಪಾಯದಿಂದ ಪಾರಾಗಲು ಮಾರ್ಗ ಸೂಚಿಗಳ ಜಾಗೃತಿ ಮೂಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಜಿಲ್ಲೆಯ ಎಲ್ಲ ಪಟ್ಟಣ ಪಂಚಾಯತಿ ಗ್ರಾ,ಮ ಪಂಚಾಯತಿಗಳಲ್ಲಿ ಕುಡಿಯುವ ನೀರು ಹಾಗೂ ಬಿಸಿಲಿನ ಪ್ರಖರತೆಯಿಂದ ಸಾರ್ವಜನಿಕರ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಡೆಸಲಾಗಿದ್ದು,ಬೇಸಿಗೆ ಸಮಯದಲ್ಲಿ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲಾಧಿಕಾರಿ ಡಾ.ಔದ್ರಾಮ, ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ತಾಲೂಕಿನ ಎಲ್ಲ ತಹಶೀಲ್ಧಾರರು, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.