ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಪೌರನಿಗಮಗಳ ಅಧಿನಿಯಮಯನ್ವಯ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯಾಗದ ವರ್ಷದಲ್ಲಿ ಪ್ರತಿ ಹಣಕಾಸು ವರ್ಷಕ್ಕೆ ಶೇಕಡಾ ೩% ರಿಂದ ೫% ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ಅವಕಾಶ ಇರುವುದರಿಂದ ೨೦೨೬-೨೭ನೇ ವರ್ಷಕ್ಕೆ ಅನ್ವಯವಾಗುವಂತೆ ೦೧-೪-೨೦೨೬ರಿಂದ ೩೧-೦೩-೨೦೨೭ರವರೆಗೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯನ್ನು ದಿ:೦೧-೦೪-೨೦೨೬ರಿಂದ ಜಾರಿಗೆ ಬರುವಂತೆ ವಾಸದ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು, ಖಾಲಿ ನಿವೇಶನಗಳು ಹಾಗೂ ಕೈಗಾರಿಕಾ ಪ್ರದೇಶಕ್ಕೆ ಶೇ.೩ ರಷ್ಟು, ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
