ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಿ.14 ಶನಿವಾರ ಮತ್ತು ದಿ.15 ರವಿವಾರ ಎರಡು ದಿನಗಳವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ದಿ.14 ಶನಿವಾರ ಬೆ.11ಗಂ. ಬಾಗಲಕೋಟೆ ನವನಗರ, ಸೆಕ್ಟರ್-1ರಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮ.3ಗಂ. ಹೊಳೆಜೈನಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂ.4.30ಗಂ. ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎ.ಪಿ.ಎಂ.ಸಿ ಗೋದಾಮು ಕಟ್ಟಡ, ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ಚಂದ್ರಗೀರಿ ಮತ್ತು ಘಟವಾಳೇಶ್ವರ ಮಠದ ಕಟ್ಟಡ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸಂ.5.30ಗಂ. ತಿಕೋಟಾದ ಬಸವೇಶ್ವರ ವೃತ್ತದಲ್ಲಿ ತುಬಚಿ-ಬಬಲೇಶ್ವರ ಯೋಜನೆಯಡಿ ಬಾಬಾನಗರದಲ್ಲಿ ಆಣೆಕಟ್ಟು ನಿರ್ಮಾಣಕ್ಕೆ ಮಂಜೂರಾದ ಹಿನ್ನೆಲೆಯಲ್ಲಿ ತಿಕೋಟಾದ ಸಮಸ್ತ ರೈತರು ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂ.6.30ಗಂ. ನಗರದ ಅಥಣಿ ರಸ್ತೆಯ ಅಲ್ ಅಮೀನ್ ಎರಡನೇ ಎದುರಿನ ಸುರಭಿ-ಸಿದ್ಧೇಶ್ವರ ಲೇಔಟನಲ್ಲಿ ರಂಭಾಪುರಿ ಪೀಠದ ಶಾಖಾ ಮಠ ಭೂಮಿಪೂಜೆ ನೆರವೇರಿಸಲಿದ್ದಾರೆ.
ದಿ.15 ರವಿವಾರ ಬೆ.10.30ಗಂ. ಸಾಯಿ ಹೃದಯ ಆಸ್ಪತ್ರೆ ಹತ್ತಿರ ಸಸ್ಯ ರೆಸ್ಟೋರೆಂಟ್ ಉದ್ಘಾಟಿಸಲಿದ್ದಾರೆ. ಬೆ.11ಗಂ. ರೇಡಿಯೋ ಕೇಂದ್ರದ ಹತ್ತಿರ ವಿಜಯ ಫಂಕ್ಷನ್ ಹಾಲ್ ನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರಿಗಾಗಿ ಏರ್ಪಡಿಸಿದ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಮ.12.30ಗಂ. ಬಿ.ಎಲ್.ಡಿ.ಇ ಸಂಸ್ಥೆ ಹೊಸ ಆವರಣದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸುಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂ.6ಗಂ. ಟಿಪ್ಪು ಸುಲ್ತಾನ ವೃತ್ತ ಕೆ.ಸಿ.ಮಾರ್ಕೆಟ್ ನಲ್ಲಿ ರಂಜಾನ್ ಹಬ್ಬದ ನಿಮಿತ್ತ ಇಫ್ತಿಯಾರ ಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

