ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಮತಕ್ಷೇತ್ರದ ಕೊಲ್ಹಾರ ತಾಲೂಕಿನ ಮಲಘಾಣ ಹಾಗೂ ಕುಪಕಡ್ಡಿ ಗ್ರಾಮಗಳಲ್ಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಚಿವ ಶಿವಾನಂದ ಪಾಟೀಲ ಅವರು ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಈ ಕಾಲೇಜುಗಳನ್ನು ಮಂಜೂರು ಮಾಡಿಸಿದ್ದು ಶ್ಲಾಘನೀಯ.ಇದು ಶೈಕ್ಷಣಿಕ ಪ್ರಗತಿಗೆ ಪೂರಕವಾಗುತ್ತದೆ. ಎರಡು ಗ್ರಾಮಗಳಲ್ಲಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿರುವ ಸಚಿವ ಶಿವಾನಂದ ಪಾಟೀಲ, ಸರ್ಕಾರಕ್ಕೆ ಅಭಿನಂದನೆಗಳು ಎಂದು ಜಿಲ್ಲಾ ಯುವ ಕಾಂಗ್ರೆಸ ಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
