Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
(ರಾಜ್ಯ ) ಜಿಲ್ಲೆ

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಾಬಾನಗರ ಬಳಿ ಎರಡೂವರೆ ವರ್ಷದಲ್ಲಿ ಡ್ಯಾಂ ನಿರ್ಮಾಣವಾಗಲಿದ್ದು, ಇದರಿಂದ ತಿಕೋಟಾ ಭಾಗದ ರೈತರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ಬಾಬಾನಗರ ಬಳಿ ಡ್ಯಾಂ‌ ನಿರ್ಮಾಣಕ್ಕೆ ಕಾರಣರಾದ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ‌ ಅವರನ್ನು ರೈತರು ಅಭಿನಂದನೆ ಕಾರ್ಯಕ್ರಮ ಆಯೋಜಿಸಿ ಮಣುಕ(ಒಣದ್ರಾಕ್ಷಿ) ಹಾರದಿಂದ ಸನ್ಮಾನಿಸಿ ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳ‌ನ್ನು ಸಮರ್ಪಿಸಿ ಕೃತಜ್ಞತೆ ಸಲ್ಲಿಸಿದರು.
ರೈತರಿಂದ ಅಭಿನಂದನೆ ಸ್ವೀಕರಿಸಿ ಮಾತಮಾಡಿದ ಸಚಿವರು, ತಾವು ಜಲಸಂಪನ್ಮೂಲ‌ ಸಚಿವರಾದ ನಂತರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಗಾಗಿ ಕೈಗೊಂಡ ಕ್ರಮಗಳು, ಎದುರಿಸಿದ ಸವಾಲುಗಳು, ಅಸಾಧ್ಯವಾದುದುನ್ನು ಸಾಧಿಸಿದ ಬಳಿಕ ರೈತರಿಗೆ ಆದ ಸಂತಸದ ಕುರಿತು ಅನುಭವ ಹಂಚಿಕೊಂಡರು.
ಆದರೂ, ಬೇಸಿಗೆಯಲ್ಲಿ ತಿಕೋಟಾ ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಾಗುತ್ತಿತ್ತು. ‌ನೀರಾವರಿ ಆಗಿರುವ ಹಿನ್ನೆಲೆಯಲ್ಲಿ ರೈತರ ಜಮೀನು ಸ್ವಾಧೀನ ಮಾಡುವ ಸ್ಥಿತಿ ಇರಲಿಲ್ಲ. ಹೀಗಾಗಿ ತುಂಬಾ ಯೋಚಿಸಿ ಬಾಬಾನಗರ ಬಳಿ ಇರುವ ಸರಕಾರಿ ಜಮೀನಿನಲ್ಲಿ ಡ್ಯಾಂ ನಿರ್ಮಿಸಲು ಬಜೆಟ್ ನಲ್ಲಿ ರೂ. 602 ಕೋ. ವೆಚ್ಚದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಮಾದರಿ ಡ್ಯಾಂ‌ ಇದಾಗಲಿದ್ದು, ನಮ್ಮ ಕೆಲಸ ಇಷ್ಟಕ್ಕೆ ನಿಲ್ಲುವುದಿಲ್ಲ. ದೇಶಕ್ಕೆ ಮಾದರಿಯಾಗುವಂತೆ ಹಳ್ಳಗಳನ್ನು ತುಂಬಿಸುವ ಯೋಜನೆಗೂ ಕ್ರಮ ಕೈಗೊಳ್ಳಲಾಗಿದೆ. ಬಾಕಿ ಉಳಿದಿರುವ ಹೊಲಗಾಲುವೆ ಕಾಮಗಾರಿಗಳ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ. ಪಂ. ಮಾಜಿ‌ ಅಧ್ಯಕ್ಷ ಸೋಮನಾಥ ಬಾಗಲಕೋಟ, ತುಬಚಿ- ಬಬಲೇಶ್ವರ ಏತನೀರಾವರಿ ಯೋಜನೆಯಡಿ ಬಾಬಾನಗರ ಬಳಿ ಜಮೀನಿನಲ್ಲಿ ರೂ. 602 ಕೋ. ವೆಚ್ಚದಲ್ಲಿ ಬಾಬಾನಗರ ಡ್ಯಾಂ ನಿರ್ಮಾಣಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡಲು‌ ಸಚಿವ ಎಂ. ಬಿ. ಪಾಟೀಲ ಕಾರಣರಾಗಿದ್ದಾರೆ. ಇದರಿಂದ ನಮ್ಮ ಭಾಗದಲ್ಲಿ ಬೇಸಿಗೆಯಲ್ಲೂ ನೀರು ಲಭ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ರೈತರ ಪರವಾಗಿ ಅಭಿನಂದನೆ ಸಲ್ಲಿಸಲಾಗುತ್ತಿದೆ. ಸಚಿವರಿಗೆ ಎಷ್ಡೇ ಕೃತಜ್ಞತೆ ಸಲ್ಲಿಸಿದರು ಸಾಲದು. ಅವರಿಗೆ ಸದಾ ಚಿರ ಋಣಿಯಾಗಿರುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೋಮದೇವರಹಟ್ಟಿ ದುರ್ಗಾದೇವಿ ದೇವಸ್ಥಾನದ ಜಗನು ಮಹಾರಾಜ, ರೈತ ಮುಖಂಡರಾದ ಸಿದ್ದು ಗೌಡನವರ, ಸೋಮನಾಥ ಬಾಗಲಕೋಟ, ಅರ್ಜುನ ಹೀರು ರಾಠೋಡ, ರಾಮನಿಂಗ ಮಸಳಿ, ರಾಮಣ್ಣ ಮೆಡೆಗಾರ, ಆರ್. ಜಿ. ಯರನಾಳ, ಎಂ. ಎಸ್. ಲೋಣಿ, ಈರನಗೌಡ ರುದ್ರಗೌಡರ, ಡಿ. ಎಲ್. ಚವ್ಹಾಣ, ಯಾಕೂಬ ಜತ್ತಿ, ಭಾಗೀರಥಿ ತೇಲಿ, ಜಿ. ಎಂ. ಪಾಟೀಲ, ಡಾ. ಮಹಿಶ್ಯಾಳೆ, ಗುದಗೆಣ್ಣವರ, ಮಧುಕರ ಜಾಧವ, ಗುರು ಮಾಳಿ, ಬಸಯ್ಯ ವಿಭೂತಿ, ರಾಮು ದೇಸಾಯಿ, ಜಕ್ಕಪ್ಪ ಯಡವೆ, ಅಲ್ಪಾಫ ಬಾಗವಾನ, ಪ್ರಶಾಂತ ಝಂಜೆ, ಮಧುಕರ ಜಾಧವ, ವಾಮನ ಚವ್ಹಾಣ, ಮಹಾದೇವ ರಾಠೋಡ, ಬಿ. ಬಿ. ಲಮಾಣಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.