ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬ರ ಏಪ್ರಿಲ್ ೫ ರಂದು ಡಾ.ಬಾಬು ಜಗಜೀವನ ರಾಮ್ ಅವರ ೧೧೯ನೇ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ್ ೨೪ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ .
ಈ ಪೂರ್ವಭಾವಿ ಸಭೆಗೆ ಗಣ್ಯರು, ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
