ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೧೯ ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಗೆ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ವಿಕಲಚೇತನರು ಭಾಗವಹಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment