ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಶೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಸಿದ್ದಮ್ಮ ಬಿರಾದಾರ ಹಾಗೂ ಶೈಲಜಾ ಪಾಟೀಲ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸಿಂದಗಿಯಲ್ಲಿ ಜರುಗಿದ ಖೋ-ಖೋ ತಂಡದ ಆಯ್ಕೆಯಲ್ಲಿ ಭಾಗವಹಿಸಿ, ಸಿದ್ದಮ್ಮ ಸತತವಾಗಿ ಎರಡನೆಯ ಬಾರಿಗೆ ಹಾಗೂ ಶೈಲಜಾ ಮೊದಲ ಬಾರಿಗೆ ವಿಶ್ವವಿದ್ಯಾಲಯ ಬ್ಲೂö್ಯ ಆಗಿ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಯರು ಮಾ.೩೦ರಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಜರುಗಲಿರುವ ಅಂತರ್ ವಿಶ್ವವಿದ್ಯಾಲಯಗಳ ಖೋ-ಖೋ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

