ವಿಜಯಪುರ: ಜಿಲ್ಲೆಯ ಬಬಲೇಶ್ವರ, ಮಮದಾಪುರ, ಹೂವಿನಹಿಪ್ಪರಗಿ, ಬಳ್ಳೊಳ್ಳಿ ಹಾಗೂ ದೇವರಹಿಪ್ಪರಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ಆಸಕ್ತ ಎಫ್‌ಪಿಓ- ಸಂಸ್ಥೆಗಳಿಗೆ ಹಸ್ತಾಂತರಿಸಲು ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಯಂತ್ರಧಾರೆ ಕೇಂದ್ರದಲ್ಲಿರುವ ಯಂತ್ರೋಪಕರಣಗಳನ್ನು ಹಸ್ತಾಂತರಿಸಿಕೊಂಡ ಸಂಸ್ಥೆಗಳು ಇಲಾಖೆ ನಿಗದಿಪಡಿಸಿದ ದರದಲ್ಲಿ ರೈತರಿಗೆ ಬಾಡಿಗೆ ಆಧಾರದ ಮೇಲೆ ನೀಡಬೇಕಾಗುತ್ತದೆ. ಆಸಕ್ತ ಅರ್ಹ ಸಂಸ್ಥೆಗಳು ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ವಿಭಾಗೀಯ ಉಪ ಕೃಷಿ ನಿರ್ದೇಶಕರು ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕೃಷಿ ಯಂತ್ರಧಾರೆ ಕೇಂದ್ರದ ಯಂತ್ರೋಪಕರಣಕ್ಕಾಗಿ ಅರ್ಜಿ ಆಹ್ವಾನ
Related Posts
Add A Comment