Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುಕೆಪಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರ ತಂಡ ದಾಳಿ
(ರಾಜ್ಯ ) ಜಿಲ್ಲೆ

ಯುಕೆಪಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರ ತಂಡ ದಾಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಗಳ ಕಾರ್ಯಾಲಯ ಹಾಗೂ ಪುನರ್ವಸತಿ ಅಧಿಕಾರಿಗಳ ಕಚೇರಿಗಳ ಮೇಲೆ ವಿಜಯಪುರ ಲೋಕಾಯುಕ್ತ ಪೊಲೀಸರ ತಂಡ ಸೋಮವಾರ ದಾಳಿ ನಡೆಸಿದರು.
ಈ ಎರಡೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಸುಮಾರು ೨೫ ಜನ ಲೋಕಾಯುಕ್ತ ಪೊಲೀಸ್ ರ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದೆ.
ಬೆಳಿಗ್ಗೆಯಿಂದಲೇ ಆರಂಭಗೊಂಡ ತಪಾಸಣೆ ಸಂಜೆಯವರೆಗೂ ಮುಂದುವರೆದಿದೆ.
ಇದು ಮುಂದಿನ ಎರಡು ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ನಡೆಯುವ ಸಾಧ್ಯತೆ ಇದೆ.
ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಛೇರಿ ಹಾಗೂ ಪುನರ್‌ವಸತಿ ಅಧಿಕಾರಿಗಳು ಕಛೇರಿಗಳಲ್ಲಿ ಸಂತ್ರಸ್ತರಿಗೆ ನೀಡುವ ಪರಿಹಾರ ವಿತರಣೆ, ಸಾರ್ವಜನಿಕ ಉದ್ದೇಶಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಕೊಳ್ಳಬೇಕಾದ ಸಂದರ್ಭದಲ್ಲಿ, ಮುಳುಗಡೆಯಾಗಿರುವ ಹಳ್ಳಿಗಳ ಜನರಿಗೆ ಪುನರ್ವಸತಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸಿಗಬೇಕಾದ ಮೂಲ ಪರಿಹಾರಕ್ಕಿಂತ ನ್ಯಾಯಾಲಯದ ಮೂಲಕ ಹೆಚ್ಚಿನ ಹಣ ಕೊಡಿಸುವುದಾಗಿ ಸಂತ್ರಸ್ತರಿಗೆ ನಂಬಿಸಿ ಮಧ್ಯವರ್ತಿಗಳ ಮೂಲಕ ಲಂಚದ ಹಣದ ಬೇಡಿಕೆ, ಭೂಮಿಯನ್ನು ಕಳೆದುಕೊಂಡ ಕುಟುಂಬಗಳಿಗೆ ಪುನರ್ವಸತಿ ಮತ್ತು ಮರುಸ್ಥಾಪನೆ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸದೆ ಇರುವುದು, ಭೂ ಬೆಲೆ ಮೌಲ್ಯ ನಿಗದಿಯಲ್ಲಿ ಅಕ್ರಮ, ಪುನರ್ವಸತಿ ಯೋಜನೆಗಳ ನಿಷ್ಕ್ರಿಯತೆ, ಅಕ್ರಮ ಭೂ ಸ್ವಾಧೀನ, ಮಧ್ಯವರ್ತಿಗಳ ಲಾಭಾರ್ಜನೆ, ಅಧಿಕಾರ ದುರ್ಬಳಕೆ ಮತ್ತು ಕರ್ತವ್ಯದಲ್ಲಿನ ನಿರ್ಲಕ್ಷತನ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈ ಎರಡು ಕಚೇರಿಗಳ ಪರಿಶೀಲನೆ, ಶೋಧನೆ ನಡೆಸಲು ವಾರಂಟ್ ಹೊರಡಿಸಿದ್ದಾರೆ.
ಅದರಂತೆ ಗೌರವಾನ್ವಿತ ಲೋಕಾಯುಕ್ತರವರು ಹೊರಡಿಸಿದ ಶೋಧನಾ ವಾರಂಟ್ ಮೇರೆಗೆ ಲೋಕಾಯುಕ್ತ ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಟಿ. ಮಲ್ಲೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ ಪಿ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಆನಂದ ಟಕ್ಕನ್ನವರ್, ಆನಂದ ಡೋಣಿ, ನಿಂಗಪ್ಪ ಪೂಜೇರಿ ಹಾಗೂ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮೇಲ್ಕಂಡ ಕಛೇರಿಗಳ ಶೋಧನೆ ಕೈಗೊಂಡಿದ್ದು, ದಾಖಲಾತಿಗಳ ಶೋಧನೆ ಕಾರ್ಯ ಮುಂದುವರೆದಿರುತ್ತದೆ ಎಂದು ಲೋಕಾಯುಕ್ತ ಕಚೇರಿಯ ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೃಷ್ಟಿಯ ಮೊದಲ ದಿನವೇ ಯುಗಾದಿ
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್
    In (ರಾಜ್ಯ ) ಜಿಲ್ಲೆ
  • ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.