ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಸಂಜಯ ಪಾಟೀಲ ಕನಮಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಯುಕ್ತ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಶರಣಗೌಡ ಪಾಟೀಲ ತಿಳಿಸಿದ್ದಾರೆ.
ಸೌಹಾರ್ದ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಸವಾಲುಗಳಿವೆ ಇದಕ್ಕೆ ಪರಿಹಾರ ಕಂಡು ಹಿಡಿಯಲು ಈಗಾಗಲೇ ವಿಜಯಪುರ ಜಿಲ್ಲೆಯಲ್ಲಿ ಸೌಹಾರ್ದ ಸಹಕಾರಿಗಳ ಒಕ್ಕೂಟದ ರಚನೆ ಮಾಡಲಾಗಿದೆ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಬೆಂಗಳೂರು ಇದರ ನಿರ್ದೇಶಕರಾಗಿ ಪಾಟೀಲರ ಆಯ್ಕೆಯಿಂದ ಜಿಲ್ಲೆಗೆ ಇನ್ನಷ್ಟು ಬಲ ಬಂದಂತಾಗಿದೆ.
ಬೆಳಗಾವಿ ವಿಭಾಗದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಗಟ್ಟಿ ಧ್ವನಿಯಾಗಿ ಸೌಹಾರ್ದ ಸಹಕಾರಿಗಳ ಸೇವೆಗೆ ಹಾಗೂ ಸರ್ವ ಸೌಹಾರ್ದ ಸಹಕಾರಿ ಸಂಘಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಪಾಟೀಲರು ತಿಳಿಸಿದ್ದಾರೆ.

