ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾರ್ಚ್.೨೨ರಂದು ಆದರ್ಶ ವಿದ್ಯಾಲಯಗಳಲ್ಲಿ ೬ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಿದ್ದಾರೆ.
