ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾ ಪಂಚಾಯತಿಯ ಮಿನಿ ಸಬಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವ್ಹಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ನಡೆಸುವುದು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿಗಳಾದ ಸಿ. ಬಿ. ಕುಂಬಾರ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿಗಳಾದ ಟಿ. ಎಸ್. ಕೊಲ್ಹಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

