ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಇಂದಿನ ವಿದ್ಯಾರ್ಥಿಗಳು ಕೇವಲ ಪುಸ್ತಕ ಜ್ಞಾನಕ್ಕೆ ಸೀಮಿತವಾಗದೆ ಉತ್ತಮ ಮೌಲ್ಯಗಳು, ಶಿಸ್ತು ಹಾಗೂ ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಿಂದಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರವಿಂದ ಡೋಣುರ ಹೇಳಿದರು.
ಸಿಂದಗಿ ನಗರದ ಕಲ್ಯಾಣ ನಗರದಲ್ಲಿರುವ ಶ್ರೀ ಹೀರಾಮಾತಾ ಹಿರಿಯ ಪ್ರಾಥಮಿಕ ಶಾಲೆಯ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಸಂಸ್ಕಾರ ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಶಿಕ್ಷಣ ಸಂಯೋಜಕ ಬಿ.ಸಿ.ಪಾಟೀಲ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣವನ್ನು ಸರಿಯಾಗಿ ಕಲಿತು ತಂದೆ-ತಾಯಿ, ಶಾಲೆ ಹಾಗೂ ಸಂಸ್ಥೆಗೆ ಕೀರ್ತಿ ತರುವಂತೆ ಸಾಧನೆ ಮಾಡಬೇಕು ಎಂದರು.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ವಹಿಸಿದ ಬೋರಗಿ—ಪುರದಾಳದ ತಪೋರತ್ನ ಮಹಾಲಿಂಗೇಶ್ವರ ಪೂಜ್ಯರು ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಂಸ್ಥೆಯ ಅಧ್ಯಕ್ಷೆ ಲಲಿತಾಬಾಯಿ ರಾಥೋಡ, ಅಯ್.ಎಸ್.ಟಕ್ಕೆ, ಎಸ್.ಎಸ್.ತಳ್ಳೊಳ್ಳಿ, ಡಿ.ಬಿ.ಮುಲ್ಲಾ, ಎನ್.ಎಸ್.ತಿಳುಗೂಳ, ಜಯಶ್ರೀ ಹದನೂರು, ಬುಳ್ಳಪ್ಪ ಡಿ, ಬಂಗಾರಿ ಕೊಡಿಯಾ, ಬಸವರಾಜ ಚವಾಣ, ಪ್ರಶಾಂತ ಕಲ್ಲೂರಮಠ, ಕವಿತಾ ಪಾಸೋಡಿ ಸೇರಿದಂತೆ ಇತರರು ಇದ್ದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸುಂದರ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

