ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಉರುಪು ಮೂಲವ್ಯಾದಿ (Anal Fissure) ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರವನ್ನು ಮಾರ್ಚ್ 23 ರಿಂದ 27ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.
ಇಂಥ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್ ಮಹಾವಿದ್ಯಾಲಯದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮತ್ತು ಶಲ್ಯತಂತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಸಾದಶಕ್ತಿ ಗಣ್ಣೂರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಡಾ. ಪ್ರವೀಣ ಚೌಗಲಾ 7760357413 ಇವರನ್ನು ಸಂಪರ್ಕಿಸಬಹುದಾಗಿದೆ.
