Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
(ರಾಜ್ಯ ) ಜಿಲ್ಲೆ

ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೂತನ ಜಾಹೀರಾತು ನೀತಿ ಸ್ಥಗಿತಗೊಳಿಸಿ ತಿದ್ದುಪಡಿಗೆ ಒತ್ತಾಯಿಸಿ ಸ್ಥಳಿಯ ದಿನಪತ್ರಿಕೆಗಳ ಸಂಪಾದಕರಿಂದ ಸಚಿವರು ಮತ್ತು ಜಿಲ್ಲಾಧಿಕಾರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸರ್ಕಾರವು ೨೦೨೬–೨೭ನೇ ಹಣಕಾಸು ವರ್ಷದಿಂದ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–೨೦೨೬ ವಿರುದ್ಧ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಈ ನೀತಿಯಲ್ಲಿ ಅಳವಡಿಸಿರುವ ಅನೇಕ ಅಂಶಗಳು ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಬೆಳವಣಿಗೆಗೆ ಮಾರಕವಾಗಿದ್ದು, ಅವುಗಳ ಅಸ್ತಿತ್ವಕ್ಕೂ ಧಕ್ಕೆಯುಂಟುಮಾಡುವ ಸಾಧ್ಯತೆ ಇದೆ ಎಂದು ಸಂಘಟನೆಗಳು ಆತಂಕ ವ್ಯಕ್ತಪಡಿಸಿ ಶುಕ್ರವಾರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದವು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ದಶಕಗಳಿಂದ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ ಹೊಸ ಜಾಹೀರಾತು ನೀತಿಯಲ್ಲಿ ಈ ಪತ್ರಿಕೆಗಳ ಹಿತಾಸಕ್ತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಲಾಗಿದೆ. ವಿಶೇಷವಾಗಿ, ಈ ನೀತಿಯನ್ನು ರೂಪಿಸುವ ವೇಳೆ ಯಾವುದೇ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದೆ ಏಕಪಕ್ಷೀಯವಾಗಿ ತಯಾರಿಸಿರುವುದು ವಿಷಾದನೀಯವಾಗಿದೆ ಎಂದು ತಿಳಿಸಿದೆ.
ಈ ನೀತಿಯ ಪ್ರಮುಖ ಸಮಸ್ಯೆಗಳಾಗಿ, ಪ್ರಸಾರ ಸಂಖ್ಯೆಗೆ ಸಂಬಂಧಿಸಿದ ಕಠಿಣ ನಿಯಮಗಳನ್ನು ಅಳವಡಿಸಿರುವುದು, ಪ್ರಾದೇಶಿಕ ಪತ್ರಿಕೆಗಳನ್ನು ಅವೈಜ್ಞಾನಿಕವಾಗಿ ಪಂಗಡ ಎ ಮತ್ತು ಬಿ ಎಂದು ವರ್ಗೀಕರಿಸಿರುವುದು, ಜಾಹೀರಾತು ದರ ಪರಿಷ್ಕರಣೆಯನ್ನು ಸಮರ್ಪಕವಾಗಿ ೬ ವರ್ಷಗಳಿಂದ ಮಾಡದೇ ಇರುವುದನ್ನು ಸಂಘಟನೆಗಳು ಗುರುತಿಸಿವೆ. ಕೋವಿಡ್ ನಂತರ ಹಾಗೂ ಡಿಜಿಟಲ್ ಮಾಧ್ಯಮಗಳ ಹೆಚ್ಚುತ್ತಿರುವ ಪ್ರಭಾವದಿಂದಾಗಿ ಈಗಾಗಲೇ ಸಣ್ಣ ಪತ್ರಿಕೆಗಳು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಇಂತಹ ನಿಯಮಗಳು ಅವುಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡಲಿವೆ ಎಂದು ಅಭಿಪ್ರಾಯಪಟ್ಟಿವೆ.
ಇದಲ್ಲದೆ, ಎಲ್ಲ ಬೆಲೆಗಳು ಗಗನಕ್ಕೆ ಏರುತ್ತಿರುವಾಗ ಜಾಹೀರಾತು ದರಗಳನ್ನು ಇಳಿಸುವ ಕ್ರಮ ಯಾವ ನ್ಯಾಯ, ಪತ್ರಿಕೆಗಳ ಅಭಿವೃದ್ದಿಗಾಗಿ ಪ್ರೋತ್ಸಾಹ ರೂಪದ ಜಾಹೀರಾತುಗಳನ್ನು ನೀಡುತ್ತಿರುವಾಗ ಪ್ರೋತ್ಸಾಹ ರೂಪದ ಜಾಹೀರಾತುಗಳನ್ನು ಸನ್ಸೆಟ್ ಕ್ಲಾಜ್ ಅಳವಡಿಸಿ ಜಾಹೀರಾತು ನಿಲ್ಲಿಸುವ ಕ್ರಮ ಹಾಗೂ ಟೆಂಡರ್ ಜಾಹೀರಾತುಗಳ ಹಂಚಿಕೆಯಲ್ಲಿ ಕಡಿತ ಮಾಡುವ ಕ್ರಮಗಳು ಸಣ್ಣ ಪತ್ರಿಕೆಗಳ ಆದಾಯ ಮೂಲಗಳನ್ನು ಕುಂಠಿತಗೊಳಿಸಲಿವೆ ಎಂದು ಸಂಘಟನೆಗಳು ಎಚ್ಚರಿಸಿವೆ. ಗಡಿ ಭಾಗದ ಕನ್ನಡ ಪತ್ರಿಕೆಗಳಿಗೆ ನೀಡಲಾಗುತ್ತಿದ್ದ ಜಾಹೀರಾತು ಬೆಂಬಲವನ್ನು ಮುಂದುವರಿಸಬೇಕೆಂಬ ಬೇಡಿಕೆಯನ್ನೂ ಸಂಘಟನೆಗಳು ಮುಂದಿಟ್ಟಿವೆ.
ಪ್ರೋತ್ಸಾಹ ರೂಪದ ಜಾಹೀರಾತುಗಳನ್ನು ಹಾಗೂ ಗಡಿ ಭಾಗದ ಜಾಹೀರಾತುಗಳನ್ನು
ಎರಡು ಮುಂದುವರೆಸಬೇಕು ಹಾಗೂ ಒಂದು ಕುಟುಂಬಕ್ಕೆ ಮತ್ತು ಆವೃತ್ತಿಗಳಿಗೂ ಒಂದೇ ಸೌಲಭ್ಯ ಎಂದು ಹೇಳುವಾಗ, ಎಲ್ಲ ಖರ್ಚು ಮಾಡಿ ಪತ್ರಿಕೆಗಳು ಸಮಾಜದ ಮುಖವಾಣಿಯಾಗಿರುವಾಗ ಈ ನೀತಿ ಏಕೆ? ಈಗಿನ ಸೌಲಭ್ಯಗಳು ನಿರಂತರವಾಗಿ ಪತ್ರಿಕೆಗಳಿಗೆ ಮುಂದುವರೆಯಬೇಕು ಎಂದು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡು, ಕರ್ನಾಟಕ ಜಾಹೀರಾತು ನೀತಿ–೨೦೨೬ ಅನ್ನು ತಕ್ಷಣ ಸ್ಥಗಿತಗೊಳಿಸಿ, ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಪುನರ್ ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿವೆ.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಸಂಪಾದಕರಾದ ಇರ್ಫಾನ್ ಶೇಖ, ಮೋಹನ ಕುಲಕರ್ಣಿ, ರಶ್ಮಿ ಪಾಟೀಲ, ಪಾಂಡುರಂಗ ಮಮದಾಪುರ, ಮಹೇಶ ಶೆಟಗಾರ, ಮಾಧವರಾವ ಕುಲಕರ್ಣಿ, ಸುಶೀಲೇಂದ್ರ ನಾಯಕ, ಸೀತಾರಾಮ ಕುಲಕರ್ಣಿ, ಸಂಜೀವ ಕುಲಕರ್ಣಿ, ಶರದ ಅರ್ಜುಣಗಿ, ಸಿದ್ದಣ್ಣ ಬಿಜಾಪುರ, ಅವಿನಾಶ ಬಿದರಿ, ಚಿದಂಬರ ಕುಲಕರ್ಣಿ, ಶರಣು ಮಸಳಿ, ಕೆ. ಕೆ. ಕುಲಕರ್ಣಿ, ಗುರು ಗದ್ದನಕೇರಿ, ಫಯಾಜ್ ಕಲಾದಗಿ, ಸಿದ್ದು ವಿಜಾಪುರ, ಕೌಶಲ್ಯ ಪನಾಳಕರ, ರಾಜು ಢವಳಗಿ, ಸಂಜಯ ಕೊಂಡಗೂಳಿ, ಪುಂಡಲಿಕ ಮುರಾಳ, ರಾಜು ಕೆರೂಟಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಉಳಿಕೆಯಿಂದ ಪ್ರಜಾಪ್ರಭುತ್ವದ ಬಲವರ್ಧನೆ

ಪತ್ರಿಕೆಗಳ ಬೆಳವಣಿಗೆಗೆ ಪೂರಕವಾಗುವ ರೀತಿಯಲ್ಲಿ ನೀತಿಯಲ್ಲಿ ತಿದ್ದುಪಡಿ ಮಾಡಬೇಕು. ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳನ್ನು ಉಳಿಸುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಗತ್ಯವಾಗಿದ್ದು, ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಘಟನೆಗಳು ಆಗ್ರಹಿಸಿವೆ.

ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ!

“ಕರ್ನಾಟಕ ಜಾಹೀರಾತು ನೀತಿ–೨೦೨೬ ರಲ್ಲಿರುವ ಅನೇಕ ಅಂಶಗಳು ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಅಸ್ಥಿತ್ವಕ್ಕೆ ಧಕ್ಕೆ ತರುವಂತಿವೆ. ಗಡಿ ಜಿಲ್ಲೆ ವಿಜಯಪುರ ಭಾಗದಲ್ಲಿ ಹಲವಾರು ವರ್ಷಗಳಿಂದ ಕನ್ನಡ ಭಾಷೆಯ ಬೆಳವಣಿಗೆಗೆ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವ ದಿಸೆಯಲ್ಲಿ ಸ್ಥಳಿಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳು ತಮ್ಮ ಬದ್ಧತೆಯನ್ನು ಕಾಲಕಾಲಕ್ಕೆ ನಿರೂಪಿಸುತ್ತಲೇ ಬಂದಿವೆ. ಪತ್ರಿಕೆ ನಿರಂತರ ಹೊರತರಲು ಅದೆಷ್ಟೇ ಸವಾಲುಗಳು ಎದುರಾದರೂ ಧೃತಿಗೆಡದೇ ತಮ್ಮ ಸಾಮಾಜಿಕ ಹೊಣೆಗಾರಿಕೆಯರಿತು ಪತ್ರಿಕೆಗಳನ್ನು ಮುನ್ನಡೆಸುತ್ತ ಬಂದಿರುವ ಸ್ಥಳಿಯ ಪತ್ರಿಕೆಗಳ ಸಂಪಾದಕರಿಗೆ ಈಗ ಸರ್ಕಾರ ತರಲಿರುವ ಹೊಸ ಜಾಹಿರಾತು ನೀತಿಯು ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುವಂತಿದೆ.”

– ಇಂದುಶೇಖರ ಮಣೂರ
ಸಂಪಾದಕರು, ’ಉದಯರಶ್ಮಿ’ ದಿನಪತ್ರಿಕೆ
ವಿಜಯಪುರ

ಸಂಪಾದಕರ ಮನವಿಗೆ ಸಚಿವ ಶಿವಾನಂದ ಪಾಟೀಲ ಅಭಯಹಸ್ತ

ಜಿಲ್ಲಾ ಮತ್ತು ಪ್ರಾದೇಶಿಕ
ಪತ್ರಿಕೆಗಳ ಬೆಳವಣಿಗೆಗೆ ಪೂರಕವಾಗುವ ರೀತಿಯಲ್ಲಿ ನೂತನ ಜಾಹಿರಾತು ನೀತಿಯಲ್ಲಿ ತಿದ್ದುಪಡಿ ಮಾಡಲು ಆಗ್ರಹಿಸಿ ದಿನಪತ್ರಿಕೆಗಳ ಸಂಪಾದಕರು ಒಟ್ಟಾಗಿ ಸಚಿವ ಶಿವಾನಂದ ಪಾಟೀಲ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಚಿವರು ಸಂಪಾದಕರ ಅಳಲನ್ನು ಆಲಿಸಿ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿ, ಈ ಕುರಿತು ತಾವು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

“ಸ್ಥಳಿಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ಬಲವರ್ಧನೆಗೆ ಸಹಕಾರಿಯಾಗಿವೆ. ಸರಕಾರದ ನೂತನ ಜಾಹಿರಾತು ನೀತಿಯಂತೆ ಪತ್ರಿಕೆಗಳನ್ನು ನಡೆಸುವುದು ಕಷ್ಟಸಾಧ್ಯ. ಈ ಹೊಸ ಜಾಹಿರಾತು ನೀತಿಯು ಸ್ಥಳೀಯ ಪತ್ರಿಕೆಗಳ ಅವಸಾನಕ್ಕೆ ಮುನ್ನುಡಿ ಬರೆದಂತಿದೆ. ಹೀಗಾಗಿ ಸಂಪಾದಕರ ಹೋರಾಟಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಬಲವಿದೆ.”

– ಅಶೋಕ ಯಡಳ್ಳಿ
ಜಿಲ್ಲಾಧ್ಯಕ್ಷರು, ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.