Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
(ರಾಜ್ಯ ) ಜಿಲ್ಲೆ

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸ್ಥಳೀಯ ದಿನಪತ್ರಿಕೆಗಳ ಸಂಪಾದಕರಿಂದ ಸಚಿವದ್ವಯರಾದ ಎಂ.ಬಿ.ಪಾಟೀಲ ಮತ್ತು ಶಿವಾನಂದ ಪಾಟೀಲ ಅವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–೨೦೨೬ನ್ನು ಸ್ಥಗಿತಗೊಳಿಸಿ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಅಭಿವೃದ್ದಿಗೆ ಪೂರಕ ನೀತಿಯನ್ನು ಅಳವಡಿಸಿ ಅನುಷ್ಠಾನಕ್ಕೆ ತರಬೇಕೆಂದು ಸಚಿವರಾದ ಡಾ. ಎಂ.ಬಿ.ಪಾಟೀಲ ಹಾಗೂ ಶಿವಾನಂದ ಪಾಟೀಲ ಅವರಲ್ಲಿ ಜಿಲ್ಲಾ ಪತ್ರಿಕೆಗಳ ಸಂಪಾದಕರು ಮನವಿ ಸಲ್ಲಿಸಿದರು.
ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ ಹೊಸ ಜಾಹೀರಾತು ನೀತಿಯಲ್ಲಿ ಈ ಪತ್ರಿಕೆಗಳ ಹಿತಾಸಕ್ತಿಯನ್ನು ಸಂಪೂರ್ಣ ವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು. ವಿಶೇಷವಾಗಿ, ಈ ನೀತಿಯನ್ನು ರೂಪಿಸುವ ವೇಳೆ ಯಾವುದೇ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದೆ ಏಕಪಕ್ಷೀಯವಾಗಿ ತಯಾರಿಸಿರುವುದು ವಿಷಾದನೀಯವಾಗಿದೆ ಎಂದು ತಿಳಿಸಿದರು.
ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಎಂ.ಬಿ.ಪಾಟೀಲ ಹಾಗೂ ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಹೇಳುತ್ತಿರುವಾಗ, ಹೊಸ ಜಾಹೀರಾತು ನೀತಿಯಿಂದಾಗಿ ಪತ್ರಿಕೆಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿದಂತಾಗಿದೆ ಆದ್ದರಿಂದ ತಕ್ಷಣವೇ ಹೊಸ ಜಾಹೀರಾತು ನೀತಿಯನ್ನು ನಿಲ್ಲಿಸಿ ಪತ್ರಿಕೆಗಳಿಗೆ ಪೂರಕವಾಗುವ ನೀತಿಯನ್ನು ತರಬೇಕೆಂದು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸಬೇಕೆಂದು ಮನವಿಮಾಡಿಕೊಂಡರು.


ಜಾಹೀರಾತು ನೀತಿಯಲ್ಲಿ ಯಾವಾವ ಅಂಶಗಳು ಇರಬೇಕೆಂಬುದರ ಬಗ್ಗೆ ಸಮಗ್ರ ವಿವರಣೆಯನ್ನು ನೀಡಿದರು.
ಸಂಪಾದಕರ ಮನವಿಗೆ ಸ್ಪಂದಿಸಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾದ್ಯಮ ಸಲಹೆಗಾರರಾದ ಕೆ.ವ್ಹಿ.ಪ್ರಭಾಕರ ಅವರಲ್ಲಿ ಪತ್ರಿಕೆಗಳ ಹಿತಾಸಕ್ತಿಯನ್ನು ಪರಿಗಣಿಸುವಂತೆ ಒತ್ತಾಯಿಸುವ ಭರವಸೆಯನ್ನು ಪತ್ರಿಕಾ ಬಳಗಕ್ಕೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಸಂಪಾದಕರಾದ ಇರ್ಪಾನ್ ಶೇಖ, ಮೋಹನ ಕುಲಕರ್ಣಿ, ಪಾಂಡುರಂಗ ಮಮದಾಪುರ, ಮಹೇಶ ಶೆಟಗಾರ, ಮಾಧವರಾವ ಕುಲಕರ್ಣಿ, ಸುಶೀಲೇಂದ್ರ ನಾಯಕ, ಕೌಶಲ್ಯ ಪನಾಳಕರ, ಸಂಜಯ ಕೊಂಡಗೂಳಿ, ಸೀತಾರಾಮ ಕುಲಕರ್ಣಿ, ಸಂಜೀವ ಕುಲಕರ್ಣಿ, ಶರದಕುಮಾರ ಅರ್ಜುಣಗಿ, ಸಿದ್ದಣ್ಣ ವಿಜಾಪುರ, ಅವಿನಾಶ ಬಿದರಿ, ಚಿದಂಬರ ಕುಲಕರ್ಣಿ, ಪವನ ಕುಲಕರ್ಣಿ, ಶರಣು ಮಸಳಿ, ವಿನೋದ ಸಾರವಾಡ, ಕೆ. ಕೆ. ಕುಲಕರ್ಣಿ, ಗುರು ಗದ್ದನಕೇರಿ, ಫಯಾಜ್ ಕಲಾದಗಿ, ಪುಂಡಲಿಕ ಮುರಾಳ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.