ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಶಿಕ್ಷಣ ನಿಧಿ ಸಲಹಾ ಸಮಿತಿಯ ಸದಸ್ಯರಾಗಿ ಅಲಮೇಲದ ಶಿವಕುಮಾರ ಗುಂದಗಿ ನೇಮಗೊಂಡಿದ್ದಾರೆ.
ಇತ್ತೀಚಿಗೆ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಪ್ರಥಮ ನಿರ್ದೇಶಕ ಮಂಡಳಿ ಸಭೆಯಲ್ಲಿ ನಿರ್ದೇಶಕ ಮಂಡಳಿಯು ಶಿಕ್ಷಣ ನಿಧಿ ಸಲಹಾ ಸಮಿತಿಗೆ ಸದಸ್ಯರುಗಳನ್ನು ನೇಮಕ ಮಾಡುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ. ಮಹಾಮಂಡಳದ ಶಿಕ್ಷಣ ನಿಧಿ ಸಲಹಾ ಸಮಿತಿಯ ಸದಸ್ಯರನ್ನಾಗಿ ವಿಜಯಪುರ ಜಿಲ್ಲೆಯ ಅಲಮೇಲ ಪಟ್ಟಣದ ಅಲಮೇಲ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಶಿವಕುಮಾರ ಗುರುಬಸಪ್ಪ ಗುಂದಗಿ ಅವರನ್ನು ನೇಮಕ ಮಾಡಲಾಯಿತು. ಸೋಮವಾರ ಅಲಮೇಲ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿ ಶಿವಕುಮಾರ್ ಗುಂದಗಿ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.

