Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೀದಿಬದಿ ಅಂಗಡಿಗಳ ತೆರವಿಗೆ ವಿರೋಧ :ವ್ಯಾಪಾರಿಗಳಿಂದವಿಷ ಕುಡಿವ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಬೀದಿಬದಿ ಅಂಗಡಿಗಳ ತೆರವಿಗೆ ವಿರೋಧ :ವ್ಯಾಪಾರಿಗಳಿಂದವಿಷ ಕುಡಿವ ಎಚ್ಚರಿಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಕಾಂಪೌಂಡ್ ಪಕ್ಕದಲ್ಲಿ ಆಟೋ ನಿಲ್ದಾಣಕ್ಕಾಗಿ ಬೀದಿ ಬದಿ ಅಂಗಡಿಗಳ ತೆರವು ಮಾಡಲು ಮುಂದಾಗಿರುವುದಕ್ಕೆ ಬೀದಿ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಂಗಡಿಗಳ ತೆರವು ಮಾಡಲು ಮುಂದಾದ್ರೆ ವಿಷ ಕುಡಿದು ಪ್ರಾಣ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೀದಿ ಬದಿ ಅಂಗಡಿಗಳನ್ನು ತೆರವು ಮಾಡದಂತೆ ಸೋಮವಾರ ಪುರಸಭೆ ಮುಖ್ಯಧಿಕಾರಿ ಸುರೇಶ್ ಅವ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಬೀದಿಬದಿ ವ್ಯಾಪಾರಿ ಮಹಾದೇವಮ್ಮ ಮಾತನಾಡಿ. ಕಳೆದ 25-30ವರ್ಷಗಳಿಂದ ಬಸ್ ನಿಲ್ದಾಣದ ಸಮೀಪದಲ್ಲೇ ಹೂ, ಹಣ್ಣು ಅಂಗಡಿ ಇಟ್ಟುಕೊಂಡು ಜೀವನ ಮಾಡಿಕೊಂಡು ಬರುತ್ತಿದ್ದೀವಿ. ಇದನ್ನೇ ನಂಬಿಕೊಂಡು ಬ್ಯಾಂಕ್ ಗಳಲ್ಲಿ ಸಾಲ ಪಡೆದುಕೊಂಡಿದ್ದೀವಿ. ವ್ಯಾಪಾರದಲ್ಲಿ ಸಿಗುವ ಅಷ್ಟೋ ಇಷ್ಟೋ ಹಣದಿಂದಲೇ ಮಕ್ಕಳ ವಿದ್ಯಾಭ್ಯಾಸ, ಮನೆ ಖರ್ಚು ಸರಿದೂಗಿಸಿಕೊಂಡು ಬರುತ್ತಿದ್ದೀವಿ. ಆದರೆ ಇದೀಗ ಏಕಾಏಕಿ, ಯಾವುದೇ ನೋಟೀಸ್ ನೀಡದೆ ದಬ್ಬಾಳಿಕೆ ಮಾಡಿ ಬೀದಿಬದಿ ಅಂಗಡಿಗಳ ತೆರವಿಗೆ ಮುಂದಾಗಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಬೀದಿಬದಿ ಅಂಗಡಿಗಳ ತೆರವು ಮಾಡಬೇಕಾದ್ರೆ, ಪುರಸಭೆ ನೋಟೀಸ್ ಕೊಡಬೇಕು. ಆದರೆ ಪುರಸಭೆ ನೋಟೀಸ್ ಕೊಟ್ಟಿಲ್ಲ. ಅಂಗಡಿ ತೆರವು ಮಾಡುವಂತೆ ನಮಗೆ ಸೂಚನೆ ನೀಡಿಲ್ಲ. ಆದರೆ ಆಟೋ ಚಾಲಕರ ಸಂಘದ ಕೆಲ ಸದಸ್ಯರು ಅಂಗಡಿ ತೆರವು ಮಾಡುವಂತೆ ದಬ್ಬಾಳಿಕೆ ಮಾಡುತ್ತಿದ್ದಾರೆ. ತೆರವಿಗೆ ಒತ್ತಾಯ ಮಾಡಿದ್ರೆ ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದರು.
ಮೈಸೂರು ಗ್ರಾಮಾಂತರ ವಿಭಾಗದ ಬೀದಿಬದಿ ವ್ಯಾಪಾರಿಗಳ ವಿಭಾಗದ ಕಾಂಗ್ರೆಸ್ ಅಧ್ಯಕ್ಷ ಜಯರಾಮ ಮಾತನಾಡಿ, ಬೀದಿಬದಿ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಾ ಬರುತ್ತಿರುವ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ಮಾಡುವುದು ಸರಿಯಲ್ಲ. ಈ ಸಂಬಂಧ ಶಾಸಕ ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಂದಿದ್ದೀವಿ. ಪುರಸಭೆ ಮುಖ್ಯಧಿಕಾರಿ ಕೂಡ ಯಥಾಸ್ಥಿತಿ ಕಾಪಾಡಿಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ. ಇಷ್ಟಾದರೂ ಅಂಗಡಿ ತೆರವು ಮಾಡಲು ಮುಂದಾದ್ರೆ ನಮ್ಮ ಸಂಘದಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಉಮೇಶ್ ಹೆಚ್ ಮಟಕೆರೆ ಮಾತನಾಡಿ, ಬೀದಿಬದಿ ವ್ಯಾಪಾರಿಗಳಿಗೆ ತೊಂದರೆ ಕೊಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹೀಗಾಗಿ ಅಂಗಡಿಗಳ ತೆರವು ಮಾಡುವ ಮುನ್ನ ವ್ಯಾಪಾರಿಗಳಿಗೆ ಬೇರೆಡೆ ವ್ಯಾಪಾರ ಮಾಡಲು ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಈಗಿರುವ ಸ್ಥಳದಲ್ಲೇ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಟೀ ಅಂಗಡಿ ರವಿ, ಹಣ್ಣಿನ ಅಂಗಡಿ ನಂಜಪ್ಪ, ಡಿಎಸ್ ಎಸ್ ಟೌನ್ ಅಧ್ಯಕ್ಷ ಉದಯ್ ಸಿದ್ದಪ್ಪಾಜಿ ರಸ್ತೆ, ಶ್ರೀಕಂಠ ಸೇರಿದಂತೆ ಬೀದಿಬದಿ ವ್ಯಾಪಾರಿಗಳು ಇದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.