ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ ಯಶಸ್ವಿ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರೀಕ್ಷೆಗಳ ನೇರ ವೀಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ತಾಂತ್ರಿಕ ವ್ಯವಸ್ಥೆಗಳು ದೋಷ ರಹಿತವಾಗಿ ಕಾರ್ಯ ನಿರ್ವಹಿಸುವಂತೆ ನಿರಂತರ ನಿಗಾವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡೆಲ್ ಅಧಿಕಾರಿಗಳಾದ ಟಿ.ಎಸ್. ಕೊಲ್ಹಾರ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

