Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
(ರಾಜ್ಯ ) ಜಿಲ್ಲೆ

ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಮಹಾತ್ಮರು ಮುತ್ತು ಇದ್ದಂತೆ. ಅವರು ಯಾವಾಗಲೂ ಅಮರರಾಗಿ ಉಳಿಯುತ್ತಾರೆ. ಅವರು ನೀಡಿದ ಸಂದೇಶಗಳು ಶಾಶ್ವತವಾಗಿ ಇರುತ್ತವೆ. ಇದನ್ನು ನಾವೆಲ್ಲರೂ ಅರಿತುಕೊಳ್ಳಬೇಕೆಂದು ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಯರನಾಳ ಗ್ರಾಮದ ವಿರಕ್ತಮಠದ ಕರ್ತೃು ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ, ಬಂಥನಾಳದ ಸಂಗನಬಸವ ಸ್ವಾಮೀಜಿಯವರ 125ನೇ ಜಯಂತಿ, ನೂತನ ಮಹಾದ್ವಾರ ಲೋಕಾರ್ಪಣೆ ಮತ್ತು ದ್ವಿಸಹಸ್ರ ಮಾತೆಯರ ಉಡಿತುಂಬುವ ಕಾರ್ಯಕ್ರಮ ಹಾಗೂ ಮಹಾರಥೋತ್ಸವದಂಗವಾಗಿ ಹಮ್ಮಿಕೊಂಡಿದ್ದ ಬಂಥನಾಳ ಸಂಗನಬಸವ ಶಿವಯೋಗಿಗಳ ಪುರಾಣ ಮಹಾಮಂಗಲ ಕಾರ್ಯಕ್ರಮ ಹಾಗೂ ಸದ್ಭಾವನ ಬುತ್ತಿ ಊಟ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಬಂಥನಾಳ ಸಂಗನಬಸವ ಶಿವಯೋಗಿಗಳು ಬರದ ನಾಡಾದ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿ ಜ್ಞಾನದಾಸೋಹಿಯಾಗಿದ್ದಾರೆ. ಇವರ ಇತಿಹಾಸವನ್ನು ಯುವಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಇವರ ಸ್ಮಾರಕ ಭವನವನ್ನು ವಿಜಯಪುರದಲ್ಲಿ ನಿರ್ಮಿಸಬೇಕಾದ ನಮ್ಮ-ನಿಮ್ಮೆಲ್ಲರ ಕರ್ತವ್ಯವಾಗಿದೆ. ಈ ಸ್ಮಾರಕದ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಶ್ರೀಮಠದಿಂದ ಭರಿಸುವುದಾಗಿ ಹೇಳಿದರು.
25 ದಿನಗಳ ಕಾಲ ಬಂಥನಾಳ ಸಂಗನಬಸವ ಶಿವಯೋಗಿಗಳ ಪುರಾಣ ನಡೆಸಿಕೊಟ್ಟ ಪ್ರವಚನಕಾರ ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ಗೈದ ಬಂಥನಾಳ ಸಂಗನಬಸವ ಶಿವಯೋಗಿಗಳ ಆದರ್ಶ ಜಗತ್ತಿಗೆ ತಿಳಿಯಬೇಕಾದರೆ ಜಿಲ್ಲೆಯಲ್ಲಿ ಶಿವಯೋಗಿಗಳ ಸ್ಮಾರಕವಾಗಬೇಕು. ಶಿವಗಿರಿ ಮಾದರಿಯಲ್ಲಿ ಬೃಹತ್ ಪುತ್ಹಳಿ ನಿರ್ಮಾಣವಾಗಬೇಕು. ಭವಿಷ್ಯದಲ್ಲಿ ಯುವಪೀಳಿಗೆಗೆ ಶಿವಯೋಗಿಗಳ ಆದರ್ಶ ತಿಳಿಯುವಂತಾಗಬೇಕಿದೆ ಎಂದರು.
ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಲ್ಲಿನ ಶ್ರೀಮಠವು ಸಂಗೀತಗಾರರಿಗೆ ವೇದಿಕೆ ಕಲ್ಪಿಸುವ ಜೊತೆಗೆ ಶ್ರೀಮಠದ ಶ್ರೀಗಳು ನೀರಾವರಿ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದೀಗ ಶೈಕ್ಷಣಿಕವಾಗಿಯೂ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಇಂಗಳೇಶ್ವರದ ಬೃಂಗೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೂವಿನಹಿಪ್ಪರಗಿಯ ದ್ರಾಕ್ಷಾಯಿಣಿ ಅಮ್ಮನವರು, ಮುಖಂಡರಾದ ರಮೇಶ ಸೂಳಿಬಾವಿ, ಶಂಕರಗೌಡ ಪಾಟೀಲ,ರವೀಂದ್ರ ನರಗುಂದ, ಸಂಗಪ್ಪ ನಾಗರಾಳ ಇತರರು ಇದ್ದರು. ಶಿಕ್ಷಕಿ ಗಿರೀಜಾ ಪಾಟೀಲ, ಶರಣಬಸು ಹಳಮನಿ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಇಂಗಳೇಶ್ವರದ ಬೃಂಗೇಶ್ವರ ಶಿವಾಚಾರ್ಯ ಸ್ವಾಮೀಜಿಯವರಿಂದ ಷಟ್ಸಸ್ಥಲ ಧ್ವಜಾರೋಹಣ ಶ್ರೀಮಠದ ಮುಂಭಾಗ ನೆರವೇರಿಸಲಾಯಿತು.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.