ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಕರ್ನಾಟಕ ಬಜೆಟ್ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ಚರ್ಚೆಗಳೂ ಆರಂಭವಾಗಿವೆ. ಸಿಎಂ ಬದಲಾವಣೆ ವಿಷಯವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.
ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು.
ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ.
ಬಜೆಟ್‌ಗೆ ಸಾಲ ಮಾಡಿದ್ದನ್ನು ಸಮರ್ಥಿಸಿಕೊಂಡ ಸಿಎಂ, ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ. ಹೀಗಾಗಿ ಸಾಲ ಮಾಡಿದ್ದೇನೆ. ರಾಜ್ಯದ ಮಿತಿಯ ಒಳಗಡೆ ಸಾಲ ಮಾಡಿದ್ದೇನೆ. ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ ಎಂದು ವಿಪಕ್ಷಗಳ ಟೀಕೆಗೆ ಉತ್ತರಿಸಿದ್ದಾರೆ.

“ಮೈಸೂರಿನ ಜನರಷ್ಟೇ ಅಲ್ಲ, ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಆದರೆ, ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್’. ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ. ಈ ವಿಷಯದಲ್ಲಿ ಹೈ ಕಮಾಂಡ್ ತೀರ್ಮಾನಕ್ಕೆ ಬದ್ಧ.”
– ಸಿದ್ದರಾಮಯ್ಯ
ಮುಖ್ಯಮಂತ್ರಿ

