Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026

ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ

ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
(ರಾಜ್ಯ ) ಜಿಲ್ಲೆ

ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ, ವೆಬ್ ಕಾಸ್ಟಿಂಗ್ ಕೇಂದ್ರಗಳ ಸೂಕ್ಷ್ಮ ಪರಿಶೀಲನೆ, ಪ್ರೇರಣಾದಾಯಕ ಭೇಟಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.
ತಾಲೂಕಿನ ಹಿಟ್ಟಿನಹಳ್ಳಿ ಶ್ರೀ ಶಿವಮೂರ್ತಿ ಸ್ವಾಮಿ ಚರಂತಿಮಠ ಪ್ರೌಢ ಶಾಲೆ ಹಾಗೂ ನಗರದ ಲೋಯೋಲಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ವಿಕಾಸ್ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ, ಪರೀಕ್ಷಾ ಪರೀಕ್ಷಾ ವ್ಯವಸ್ಥೆಯ ಸಮಗ್ರ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳೊಂದಿಗೆ ಸ್ನೇಹಪೂರ್ಣವಾಗಿ ಮಾತನಾಡಿದ ಅವರು, ಯಾವುದೇ ರೀತಿಯ ಆತಂಕ ಪಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಿದರು. ನಿಮ್ಮ ಪರಿಶ್ರಮವೇ ನಿಮ್ಮ ಯಶಸ್ಸಿನ ಮೂಲ, ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿರಿ ಎಂದು ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು. ಈ ಮಾತುಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದವು
ಬಳಿಕ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ, ಭದ್ರತಾ ವ್ಯವಸ್ಥೆಗಳು, ಪ್ರಶ್ನೆಪತ್ರಿಕೆ ವಿತರಣೆ ಕ್ರಮ, ಪರೀಕ್ಷಾ ಮೇಲ್ವಿಚಾರಣೆ, ಪ್ರಥಮ ಚಿಕಿತ್ಸಾ ವ್ಯವಸ್ಥೆ ಹಾಗೂ ಕುಡಿಯುವ ನೀರು ಸೇರಿದಂತೆ ಪ್ರತಿಯೊಂದು ಹಂತವನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು.
ಪರೀಕ್ಷಾ ಮೇಲ್ವಿಚಾರಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವುದನ್ನು ಪರಿಶೀಲಿಸಿ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲು ಸೂಚಿಸಿದರು.
ನಂತರ, ಸಿಇಒ ಅವರು ಪರೀಕ್ಷೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾಗಿರುವ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಪ್ರಕ್ರಿಯೆಯನ್ನು ಲೈವ್ ಪ್ರಸಾರದ ಮೂಲಕ ವೀಕ್ಷಿಸಿ, ಪ್ರತಿಯೊಂದು ಕೇಂದ್ರದಲ್ಲಿಯೂ ಶಿಸ್ತು ಮತ್ತು ನಿಯಮ ಪಾಲನೆಯು ಸಮರ್ಪಕವಾಗಿ ನಡೆಯುತ್ತಿರುವುದನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡೆಲ್ ಅಧಿಕಾರಿಗಳಾದ ಟಿ. ಎಸ್. ಕೊಲ್ಹಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026

ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ

ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ

ಜೂ.೨೩-೨೪ಕ್ಕೆ ಕಿಡ್ನಿ ಸಂಬಂದಿತ ಸಮಸ್ಯೆಗಳಿಗೆಉಚಿತ ಚಿಕಿತ್ಸಾ ಶಿಬಿರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಜೂ.೨೩-೨೪ಕ್ಕೆ ಕಿಡ್ನಿ ಸಂಬಂದಿತ ಸಮಸ್ಯೆಗಳಿಗೆಉಚಿತ ಚಿಕಿತ್ಸಾ ಶಿಬಿರ
    In (ರಾಜ್ಯ ) ಜಿಲ್ಲೆ
  • ವಿಶ್ವ ಯುವ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಶಿಫಾ ಜಮಾದಾರ
    In (ರಾಜ್ಯ ) ಜಿಲ್ಲೆ
  • ​ಮೈಸೂರು ವಿವಿ ಬಿ.ವಿ.ಎ ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೨ರಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.