ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೋರಟಗಿಯ ೧೧೦/೧೧ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಈ ಉಪ ಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆ.ವಿ ಮಾರ್ಗಗಳಲ್ಲಿ ಮಾ.೨೬ರ
ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
