ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಮಾರ್ಚ 30 ರಿಂದ ಎಪ್ರಿಲ್ 4ರ ವರೆಗೆ (25 ರಿಂದ 60 ವರ್ಷದವರಿಗೆ) ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ.
ಸೋಮವಾರದಿಂದ ಶನಿವಾರದವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಫ್ಯಾಟಿ ಲಿವರ್ (ಲಿವರ್ ಸಮಸ್ಯೆ) ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಮಹಾವಿದ್ಯಾಲಯ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ. ನಂ. 9513397413 ಸಂಪರ್ಕಿಸಬಹುದಾಗಿದೆ.
