ವಿಜಯಪುರ: ಜಿಲ್ಲಾಡಳಿತದ ಮೂಲಕ ಅ.೨೮ ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿ ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅ.೨೮ರ ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ ೧೦:೩೦ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ಎಸ್ ಎಸ್. ಎಲ್. ಸಿ ಹಾಗೂ ಪಿ. ಯು. ಸಿ ಯಲ್ಲಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು ಸೇರಿದಂತೆ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವುದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿಗಳಾದ ಬಸಣೆಪ್ಪ ಕಲಶೆಟ್ಟಿ, ವಿಜಯಪುರ ತಹಶೀಲ್ದಾರರಾದ ಶ್ರೀಮತಿ ಕವಿತಾ, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ ಕೋಲೂರ, ಸಮಾಜ ಕಲ್ಯಾಣ ಇಲಾಖೆಯ ಟಿ.ವಿ ಮಂಟೂರ ಮುಖಂಡರಾದ ಮಲ್ಲಿಕಾರ್ಜುನ ಬಟಗಿ, ಮರಳಸಿದ್ಧ ನಾಯ್ಕೋಡಿ, ಸಾಯಿಕುಮಾರ ಬಿಸ್ನಾಳ, ಮಹಾದೇವ ವಾಲೀಕಾರ, ಬಿ.ಎಸ್.ಗಸ್ತಿ, ಸೋಮು ಜಮಾದಾರ, ಗಿರೀಶ ಕುಲಕರ್ಣಿ, ಭೀಮರಾಂ ಜಿಗಜಿಣಗಿ, ದೇವೇಂದ್ರ ಮಿರೇಕರ್ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು.
ಜಿಲ್ಲಾಡಳಿತದಿಂದ ಅ.೨೮ರಂದು ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ
Related Posts
Add A Comment