ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಭಗವಾನ್ ಶ್ರೀ ಮಾಹಾವೀರ ಜಯಂತಿ ಮಾ.೩೦ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯:೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ಜರುಗಲಿದೆ.
ಹೀರಾಚಂದ್ ಎಸ್.ಗಾಂಧಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶಿವಾನಂದ ಬಿ. ಬಜಂತ್ರಿ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
