ಬಾಲ್ಯವಿವಾಹ ಮುಕ್ತ ಕರ್ನಾಟಕ ಅಭಿಯಾನದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ್ ಕುಂದರ್ ಅಭಿಮತ
ವಿಜಯಪುರ: ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ಸಂತೋಷ್ ಎಸ್. ಕುಂದರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ, ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ ಅ.೧೬ರಂದು ವಿಜಯಪುರದ ರುಡ್‌ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಬೇಕು. ಯಾರೂ ಬಾಲ್ಯವಿವಾಹಕ್ಕೆ ಪ್ರೋತ್ಸಾಹ ನೀಡಬಾರದು. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಇದನ್ನು ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಧರ್ ಕುಲಕರ್ಣಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಸಾವಿತ್ರಿ ಗುಗ್ಗರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಸ್.ಸಿ. ಮ್ಯಾಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲರಾದ ಬಾಬು ಅವತಾಡೆ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಮುತ್ತಣ್ಣ ಧನಕರ್, ಮೌನೇಶ ಪೋತದಾರ, ಗುರುರಾಜ ಇಟಗಿ, ಶ್ರೀಮತಿ ಭಾರತಿ ಪಾಟೀಲ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.