Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
(ರಾಜ್ಯ ) ಜಿಲ್ಲೆ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಎಬಿವ್ಹಿಪಿ ಹಮ್ಮಿಕೊಂಡಿದ್ದ ’ಉಘೇ ವೀರಭೂಮಿ’ ಕಾರ್ಯಕ್ರಮ

*ಉದಯರಶ್ಮಿ ದಿನಪತ್ರಿಕೆ*

ವಿಜಯಪುರ: ಸಿನಿಮಾಗಳಲ್ಲಿ ನಟಿಸುವ ನಟ – ನಟಿಯರು ಹೀರೋಗಳಲ್ಲ. ನಿಜವಾದ ಹೀರೋಗಳೆಂದರೆ ನಮ್ಮ ದೇಶಕ್ಕಾಗಿ ಪ್ರಾಣ ಅರ್ಪಣೆ ಮಾಡಿದ ಹೋರಾಟಗಾರರು ಹಾಗೂ ದೇಶದ ಗಡಿಯಲ್ಲಿ ನಿಂತು ನಮ್ಮನ್ನು ರಕ್ಷಿಸುತ್ತಿರುವ ಸೈನಿಕರು ನಿಜವಾದ ಹೀರೋಗಳು ಎಂದು ವಾಗ್ಮಿ ಬಸವರಾಜ ಹಂಚಲಿ ಹೇಳಿದರು.
ನಗರದ ಹುತಾತ್ಮ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಭಗತ್ ಸಿಂಗ್ ರಾಜಗುರು ಸುಖದೇವ ಅವರ ಬಲಿದಾನ ದಿವಸದ ಅಂಗವಾಗಿ ಹಮ್ಮಿಕೊಂಡಿದ್ದ ಉಘೇ ವೀರಭೂಮಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕರಾಗಿ ಮಾತನಾಡಿದ ಅವರು, ದೇಶದ ಶ್ರೇಷ್ಠತೆ ಮತ್ತು ಪರಂಪರೆ ನಮಗೆಲ್ಲ ಪ್ರೇರಣೆ ಆಗಬೇಕು, ಈ ಮೂರು ಜನ ತರುಣರು ತಮ್ಮ ಚಿಕ್ಕ ವಯಸ್ಸಿನಲ್ಲಿ ಭಾರತ ಮಾತೆಯನ್ನು ಬ್ರಿಟಿಷರ ಕಪಿಮುಷ್ಟಿಯಿಂದ ಮುಕ್ತ ಮಾಡಬೇಕೆಂದು ಕ್ರಾಂತಿಕಾರಿ ಹೋರಾಟವನ್ನು ಮಾಡಿದರು, ತಾವು ಗಲ್ಲಿಗೇರುವ ಸಮಯದಲ್ಲಿ ನಗುತ್ತಾ ಘೋಷಣೆಗಳನ್ನು ಮೊಳಗಿಸುತ್ತಾ ಭಯವಿಲ್ಲದೆ ಗಲ್ಲಿಗೇರಿದ ಮಹಾನ್ ರತ್ನಗಳು ಇವರನ್ನು ಇಂದಿನ ಯುವಕರು ಸ್ಮರಿಸಿಕೊಳ್ಳಬೇಕು. ಇವರು ನಮಗೆ ಪ್ರೇರಣೆ ಆಗಬೇಕು ಎಂದರು.
ಎಬಿವಿಪಿಯ ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ ಕುಳಗೇರಿ ಮಾತನಾಡಿ, ಸ್ವಾತಂತ್ರ‍್ಯ ನಂತರದ ಯುವಶಕ್ತಿ ದೇಶಕ್ಕಾಗಿ ಬದುಕುವ ಅವಶ್ಯಕತೆ ಇದೆ, ಆದರೆ ಇಂದಿನ ಯುವಕರು ಡ್ರಗ್ಸ್, ಗುಟ್ಕಾ, ಮದ್ಯಪಾನಕ್ಕೆ ದಾಸರಾಗಿ ತಮ್ಮ ಅಮೂಲ್ಯ ಶಕ್ತಿಯನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಇದರಿಂದ ದೂರವಾಗಿ, ಸಶಕ್ತ, ಸದೃಢ, ಸ್ವಾಭಿಮಾನಿ ಭಾರತವನ್ನು ನಿರ್ಮಾಣ ಮಾಡುವಲ್ಲಿ ನಾವೆಲ್ಲರೂ ಪಾತ್ರರಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ ವಿಜಯಕುಮಾರ ಭಾವಿ ಮಾತನಾಡಿ ಸ್ವಾಭಿಮಾನಿ, ಸ್ವದೇಶಿ, ಭಾರತವನ್ನು ನಿರ್ಮಾಣ ಮಾಡಬೇಕು, ಅದಕ್ಕೆ ಯುವಶಕ್ತಿ ಬೆಂಬಲವಾಗಿ ನಿಂತು ವಿಶ್ವಗುರು ಭಾರತವನ್ನು ನಿರ್ಮಾಣ ಮಾಡಬೇಕು ಎಂದರು.
ಎಬಿವಿಪಿಯ ಜಿಲ್ಲಾ ಸಂಚಾಲಕ ಸಂದೀಪ ಅರಳಗುಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಂತ ಕಾರ್ಯಸಮಿತಿ ಸದಸ್ಯರಾದ ಡಾ. ಅಮಿತಕುಮಾರ ಬಿರಾದಾರ, ನಗರ ಕಾರ್ಯದರ್ಶಿ ಸ್ನೇಹಾ ಹಿರೇಮಠ, ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ, ವಕೀಲರಾದ ಬಸವರಾಜ ಯಾದವಾಡ, ಸಿದ್ದು ಮದರಕಂಡಿ, ಸುರೇಖಾ ಕುಲಕರ್ಣಿ, ಮಂಜುನಾಥ ಹಳ್ಳಿ, ನಾಗೇಶ ಸಿಂಧೆ, ಸುಮಾ ಬೋಳರಡ್ಡಿ, ಓಂಕಾರ ನಾವಿ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ
    In (ರಾಜ್ಯ ) ಜಿಲ್ಲೆ
  • ಪಡಿತರ ಅಕ್ಕಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಜೂ.೨೩ ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿದ ಶಿಕ್ಷಣ ಸಂಸ್ಥೆಗಳು
    In (ರಾಜ್ಯ ) ಜಿಲ್ಲೆ
  • ನಿಮ್ಮ ದುರಾಡಳಿತ ಮುಚ್ಚಿಕೊಳ್ಳಲು ಆರೆಸ್ಸೆಸ್ ಟೀಕಿಸಬೇಡಿ
    In (ರಾಜ್ಯ ) ಜಿಲ್ಲೆ
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.