ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ತಾಲೂಕಿನ ರೋಣಿಹಾಳ 110 ಕೆವಿ ವಿದ್ಯುತ್ ಮಾರ್ಗಗಳ ಮಾಸಿಕ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಮಾ.29 ರವಿವಾರ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಅವಧಿಯಲ್ಲಿ ವಿದ್ಯುತ್ ಉಪಕೇಂದ್ರಗಳಿಂದ ಹೊರಹೋಗುವ ಎಲ್ಲಾ 11 ಕೆವಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.
