ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಿಕಾ ರಂಗದ ಪಾತ್ರ ಅತ್ಯಂತ ದೊಡ್ಡದು ಎಂದು ಅಭಿಪ್ರಾಯಪಟ್ಟ ಗದಗ-ಶಿರಹಟ್ಟಿ-ಬಾಳೆಹೋಸೂರ ಸಂಸ್ಥಾನದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು, ‘ಅಪರಾಧಕ್ಕೆ ಸವಾಲು’ ಕನ್ನಡ ದಿನಪತ್ರಿಕೆಯ ಸಂಪಾದಕ ಹಾಗೂ ಹಿರಿಯ ಪತ್ರಿಕೋದ್ಯಮಿ ಟಿ. ಕೆ. ಮಲಗೊಂಡ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ತಾಲೂಕಿನ ಕಡಣಿ ಗ್ರಾಮದಲ್ಲಿ ಮಾರ್ಚ್ 27ರಂದು ಜರುಗಿದ ಶ್ರೀ ಭೋಗಲಿಂಗೇಶ್ವರ ಜಾತ್ರಾ ಮಹೋತ್ಸವದ ವೇದಿಕೆಯಲ್ಲಿ ಟಿ ಕೆ ಮಲಗೊಂಡ ಅವರ ಸುದೀರ್ಘ ಪತ್ರಿಕಾ ಸೇವೆ ಹಾಗೂ ಸಾಮಾಜಿಕ ಕಾಳಜಿಯನ್ನು ಗುರುತಿಸಿ ಶ್ರೀಗಳು ಶಾಲು ಹೊದಿಸಿ ಗೌರವಿಸಿದರು.

