ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಸಮೀಪದ ಹುಣಶ್ಯಾಳ ಗ್ರಾಮದ ಟಿಪ್ಪುಸುಲ್ತಾನ ಹೈದರಸಾಬ ಸಿಪಾಯಿ ಅವರನ್ನು ಕೆಪಿಸಿಸಿ ಅಧ್ಯಕ್ಷರ ನರ್ಧೇಶನದ ಮೇರೆಗೆ ಹಾಗೂ ಮಾಜಿ ಶಾಸಕರಾದ ಶರಣಪ್ಪ ಸುಣಗಾರ ಅವರ ಶಿಫಾರಸ್ಸಿನಂತೆ ದೇವರಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಘಟನಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
