ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ ೨ರ ಗುರುವಾರ ಬೆಳಿಗ್ಗೆ ೮ ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಲಾಗಿದೆ.
ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಕೆ. ಮಾರಿಹಾಳ ಅವರು ವಂದನೆ ಸ್ವೀಕರಿಸಲಿದ್ದಾರೆ.
ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಮನಗೌಡ ಹಟ್ಟಿ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

