Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧ ರಿಂದ ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ
(ರಾಜ್ಯ ) ಜಿಲ್ಲೆ

ಏ.೧ ರಿಂದ ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಜನಗಣತಿ ಕುರಿತ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ, ದೇಶದ ಸಾಮಾಜಿಕ-ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು ಭಾರತದ ಮೊದಲ ಡಿಜಿಟಲ್ ಜನಗಣತಿ ಮತ್ತು ೧೬ ನೇ
ಜನಗಣತಿಯು ಏಪ್ರಿಲ್ ನಿಂದ ೨ ಹಂತದಲ್ಲಿ ಆರಂಭಗೊಳ್ಳಲಿದೆ.
ಸ್ವಯಂ ಗಣತಿಗೆ ಹೀಗೆ ಮಾಡಿ
ಜನಗಣತಿಯ ಸುರಕ್ಷಿತ ವೆಬ್ ಪೋರ್ಟಲ್: https://se.census.gov.inಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ. ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ. ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ. ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ Sಇ ಖeಜಿeಡಿeಟಿಛಿe Iಆ ಪಡೆಯಿರಿ.ಈಗ ಬಂದಿರುವ ನಿಮ್ಮ Sಇ Iಆ ಅನ್ನು ಸುರಕ್ಷಿತವಾಗಿ ಇಟ್ಟು, ಇಟಿumeಡಿಚಿಣoಡಿ ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಳ್ಳಬೇಕು.
ಕ್ಷೇತ್ರ ಪರಿಶೀಲನೆ
ಏ.೧೬ ರಿಂದ ಮೇ.೧೫ ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುತ್ತಾರೆ.
ಒಂದು ವೇಳೆ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಅವರು ನಿಮ್ಮಿಂದಲೇ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಈ ಅವಧಿಯಲ್ಲಿ ಶೇ.೧೦೦ರಷ್ಟು ಗೌಪ್ಯತೆ ಇಟ್ಟು ನಿಮ್ಮ ಸ್ವಯಂ ಗಣತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏ.೧೬ ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ ೧೫ ದಿನಗಳ ಮುಂಚಿತವಾಗಿ ಅಂದರೆ ಏಪ್ರಿಲ್ ೧ ರಿಂದ ೧೫ ವರೆಗೆ ಸ್ವಯಂ ಗಣತಿ ಕಾರ್ಯಕ್ಕೆ ಅವಕಾಶ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.
ಏ. ೧ರಿಂದ ಏ.೧೫ ರವರೆಗೆ ಸ್ವಯಂ ಗಣತಿ ವೆಬ್ ಪೋರ್ಟಲ್ ಲಭ್ಯವಿದೆ. ಮೊಬೈಲ್, ಡೆಸ್ಕ್ ಟಾಪ್, ಲ್ಯಾಪ್ ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿ ಆಗಲಿದೆ.
ಮಾಹಿತಿ ಭರ್ತಿಯ ವೇಳೆ, ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲ್ಲೂಕು, ಗ್ರಾಮ/ಪಟ್ಟಣ/ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್ ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆಯೂ ಇರುತ್ತದೆ.
ಸ್ವಯಂ-ಗಣತಿ (Seಟಜಿ-ಇಟಿumeಡಿಚಿಣioಟಿ) ಪೋರ್ಟಲ್ ನಲ್ಲಿ ಕೇಳಿರುವ ಕೇಳುವ ಪ್ರಶ್ನೆಗಳಿಗೆ ಮನೆಪಟ್ಟಿ ಕಾರ್ಯಾಚರಣೆ ಮೊಬೈಲ್ ಆಪ್ ನಲ್ಲಿರುವಂತೆಯೇ ರೂಪಿಸಲಾಗಿದ್ದು, ಕೆಲವು ಮಾಹಿತಿಗಳು ಪೂರ್ವ ಭರ್ತಿಯಾಗಿರಬಹುದು. ಸಾರ್ವಜನಿಕರಿಗೆ ಸಹಾಯವಾಗುವಂತೆ ಪದೇ ಪದೇ ಕೇಳುವ ಪ್ರಶ್ನೆಗಳು (ಈಂಕಿs) ಮತ್ತು ಮಾರ್ಗಸೂಚಿಗಳನ್ನೂ ಒದಗಿಸಲಾಗಿದೆ.
ಕುಟುಂಬವು ತಮ್ಮ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Seಟಜಿ-ಇಟಿumeಡಿಚಿಣioಟಿ Iಆ) ನೀಡಲಾಗುತ್ತದೆ. ಈ ಐಡಿಯನ್ನು ಎಸ್ ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (ಇಟಿumeಡಿಚಿಣoಡಿ) ಈ ಐಡಿಯನ್ನು ಸಾರ್ವಜನಿಕರು ಹಂಚಿಕೊಳ್ಳಬಹುದು.
ಒಂದು ವೇಳೆ ಸಾರ್ವಜನಿಕರು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಗಣತಿದಾರರು ತಮ್ಮಿಂದಲೇ ಮಾಹಿತಿಯನ್ನು ಸಂಗ್ರಹಿಸುತ್ತಾರೆ.
ಸ್ವಯಂ ಗಣತಿಯು ಶೇ. ೧೦೦ ರಷ್ಟು ಗೌಪ್ಯತೆಯ ಭದ್ರತೆ ನೀಡಲಿದ್ದು, ಪ್ರತಿಯೊಬ್ಬರೂ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.