ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ದ ಯುನೈಟೆಡ್ ರಾಷ್ಟ್ರ ಸೇವಾ ಫೌಂಡೇಶನ್ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಧರ್ಮದ್ವಜ ಪ್ರತಿಷ್ಠಾನ, ಬೆಂಗಳೂರು ವತಿಯಿಂದ 2025-26ನೇ ಸಾಲಿನ “ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ” ಪಟ್ಟಣದ ಶೀಲವಂತ ಹಿರೇಮಠದ ಡಾ. ಕೈಲಾಸನಾಥ ಮಹಾಸ್ವಾಮಿಗಳಿಗೆ ಲಭಿಸಿದೆ.
ಪ್ರಶಸ್ತಿಯು ರೂ.25 ಸಾವಿರ ನಗದು ಸಹಿತ ಗೌರವಪೂರಿತ ಪುರಸ್ಕಾರವನ್ನು ಒಳಗೊಂಡಿದ್ದು, ಏಪ್ರಿಲ್ 5ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದಾನವಾಗಲಿದೆ. ಪೂಜ್ಯರ ಆಧ್ಯಾತ್ಮಿಕ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಗುರುಹಿರಿಯರು, ಭಕ್ತರು ಹಾಗೂ ಶಿಷ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

