Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!

ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!

ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ಎಸಿ ಗುರುನಾಥ ದಡ್ಡೆ ಭೇಟಿ
(ರಾಜ್ಯ ) ಜಿಲ್ಲೆ

ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ಎಸಿ ಗುರುನಾಥ ದಡ್ಡೆ ಭೇಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ (ಎನ್ಟಿಪಿಸಿ) ವ್ಯಾಪ್ತಿಯ ಕೃತಕ ಹಾರು ಬೂದಿ ಕೆರೆಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ವಿರುದ್ಧ ರೈತ ಸಂಘ ಹಾಗೂ ಸ್ಥಳೀಯ ರೈತರು ಬಹುದಿನಗಳಿಂದ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ರೈತ ಸಂಘದ ಮುಖಂಡರಾದ ಸೋಮು ಬಿರಾದಾರ ಹಾಗೂ ರಮೇಶ ಬೀಳಗಿ ಮಾತನಾಡಿ, ಹಾರು ಬೂದಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿದರು. ಮೊದಲು ಕೆರೆಯಲ್ಲಿ ನೀರು ತುಂಬಿಸಿ ಬೋಟ್‌ಗಳ ಮೂಲಕ ಬೂದಿಯನ್ನು ಟ್ಯಾಂಕರ್‌ಗಳಲ್ಲಿ ಸಾಗಿಸಲಾಗುತ್ತಿತ್ತು. ಆದರೆ ಇದೀಗ ನೀರು ಹರಿಸದೇ ಒಣ ಬೂದಿಯನ್ನು ಜೆಸಿಬಿ, ಹಿಟಾಚಿ ಯಂತ್ರಗಳ ಮೂಲಕ ತೆರೆದ ಟಿಪ್ಪರ್ ಹಾಗೂ ಲಾರಿಗಳಲ್ಲಿ ಸಾಗಿಸಲಾಗುತ್ತಿದೆ ಎಂದು ದೂರಿದರು.
ಇದರಿಂದ ರಾಸಾಯನಿಕ ಮಿಶ್ರಿತ ಬೂದಿ ಧೂಳು ಗಾಳಿಯಲ್ಲಿ ಹರಡಿ ಸುತ್ತಮುತ್ತಲಿನ ಗ್ರಾಮಗಳಿಗೆ ವ್ಯಾಪಿಸುತ್ತಿದ್ದು, ಕುಡಿಯುವ ನೀರು ಮತ್ತು ಆಹಾರ ಮಾಲಿನ್ಯಗೊಂಡು ಜನಜಾನುವಾರುಗಳಿಗೆ ತೀವ್ರ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ ಎಂದು ಹೇಳಿದರು.
ರೈತರ ಫಲವತ್ತಾದ ಕೃಷಿಭೂಮಿಯೂ ಹಾನಿಗೊಳಗಾಗಿ ಬೆಳೆಗಳ ಮೇಲೆ ಬೂದಿ ಆವರಿಸಿರುವುದರಿಂದ ನಷ್ಟ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಮಾರು 200-300 ಎಕರೆ ಪ್ರದೇಶದಲ್ಲಿರುವ ಕೃತಕ ಕೆರೆಗಳಿಗೆ ನೀರು ಹರಿಸಿ ಹಿಂದಿನಂತೆ ಬೋಟ್‌ಗಳ ಮೂಲಕವೇ ಬೂದಿ ತುಂಬಿ ಟ್ಯಾಂಕರ್ ಗಳಲ್ಲಿ ಬೂದಿ ಸಾಗಿಸಬೇಕು. ಕೆರೆಗಳ ಸುತ್ತ ತಂತಿಬೇಲಿ ನಿರ್ಮಿಸಬೇಕು. ಹಾರು ಬೂದಿ ನೀರು ಸುತ್ತಮುತ್ತ ಹರಡದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಎನ್ಟಿಪಿಸಿ ನೇಮಕಾತಿಗಳಲ್ಲಿ ಸ್ಥಳೀಯ ಸಂತ್ರಸ್ತರ ಮಕ್ಕಳಿಗೆ ಆದ್ಯತೆ ನೀಡಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಎಸಿ ಗುರುನಾಥ ದಡ್ಡೆ ಅವರು ರೈತರು ಹಾಗೂ ಎನ್ಟಿಪಿಸಿ ಅಧಿಕಾರಿಗಳೊಂದಿಗೆ ಹಾರು ಬೂದಿ ಕೆರೆ ಪ್ರದೇಶ ಮತ್ತು ಸುತ್ತಲಿನ ಕೃಷಿಭೂಮಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರ ಅಹವಾಲುಗಳನ್ನು ಆಲಿಸಿದ ಅವರು, ಹಾರು ಬೂದಿ ನಿಯಂತ್ರಣಕ್ಕೆ ಸಂಬಂಧಿಸಿದ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರೈತರ ಬೇಡಿಕೆಗಳನ್ನು ಚರ್ಚಿಸಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಶಶಿಕಾಂತ ಬಿರಾದಾರ, ಸುನಿಲ ಹಿರೇಮಠ, ಯಮನೂರು ಬಿಸ್ಟಗೊಂಡ, ಶ್ರೀಶೈಲ ಬಾಡಗಿ, ಸಂಗಣ್ಣ ಗೋಲಗೊಂಡ, ಮಂಜುನಾಥ ಅರಕೇರಿ, ರಾಜುಗೌಡ ಪಾಟೀಲ್, ರಾಜು ತಳವಾರ, ಗ್ಯಾನು ಪಾಟೀಲ ಸೇರಿದಂತೆ ಎನ್ಟಿಪಿಸಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!

ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!

ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ

ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಬೆಂಬಲಿಸಿ :ನಾರಯಣಸ್ವಾಮಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!
    In (ರಾಜ್ಯ ) ಜಿಲ್ಲೆ
  • ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಬೆಂಬಲಿಸಿ :ನಾರಯಣಸ್ವಾಮಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಖಾಸಗಿ ಕಂಪನಿ ೧೦ ಲಕ್ಷ ರೂ. ಪೀಠೋಪಕರಣ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ಎಸಿ ಗುರುನಾಥ ದಡ್ಡೆ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ.ಕೈಲಾಸನಾಥ ಶ್ರೀಗೆ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಏ.೧ ರಿಂದ ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಏ.೨ ರಂದು ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.